ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ನಾಟಕ ನೋಡಿದ್ದೇನೆ.ಯಾವ ಸಂದರ್ಭದಲ್ಲಿ ಏನು ಮಾಡಬೇಕು ಎನ್ನುವುದು ನನಗೆ ಗೊತ್ತಿದೆ. ನನ್ನಲ್ಲಿನ್ನು ಚೈತನ್ಯವಿದೆ. ಹೋರಾಟ ಮಾಡುತ್ತೇನೆ ಎಂದು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಚಿಕ್ಕದಾಸರಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಯಾವುದೇ ಹುಚ್ಚು ಸ್ವಾರ್ಥವಿಲ್ಲ. ನಾನು ವಿಶ್ರಾಂತಿ ಪಡೆಯುವುದಿಲ್ಲ. ನಿಮಗಾಗಿ ದುಡಿಯುತ್ತೇನೆ. ಜೆಡಿಎಸ್ ಪಕ್ಷವನ್ನು ಯಾರ ಆಶ್ರಯವಿಲ್ಲದೆಯೇ ಅಧಿಕಾರಕ್ಕೆ ತರಬೇಕು. ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಉಳಿಯಬೇಕು ಎನ್ನುವ ಹುಚ್ಚಿದೆ. ರಾಜ್ಯದ ಜನರ ಬದುಕು ಹಸನಾಗಬೇಕು ಎನ್ನುವ ಬಯಕೆಯಿದೆ. ರಾಜ್ಯದಲ್ಲಿ ಉತ್ತಮ ಸರಕಾರ ಅಧಿಕಾರಕ್ಕೆ ಬರಬೇಕು ಎಂದರು.
ರಾಷ್ಟ್ರೀಯ ಪಕ್ಷಗಳ ಅಧಿಕಾರ ಬಲ ಹಣಬಲದ ಮುಂದೆ ಪ್ರಾದೇಶಿಕ ಪಕ್ಷ ಉಳಿಯುವಂತೆ ಮಾಡುವುದು ಜನತೆಯ ಕೈಯಲ್ಲಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.