ಬೆಂಗಳೂರು : ದೆಹಲಿಯ ನಿವಾಸಗಳ ಮೇಲಿನ ಐಟಿ ದಾಳಿ ಪ್ರಕರಣ ಸಂಬಂಧ ಇಡಿ(ಜಾರಿ ನಿರ್ದೇಶನಾಲಯ) ಸಮನ್ಸ್ ರದ್ದು ಕೋರಿ ಡಿಕೆಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.
ಈ ಹಿನ್ನಲೆಯಲ್ಲಿ ಡಿಕೆ ಶಿವಕುಮಾರ್ ಅವರು ಇಂದು ಇಡಿ ವಿಚಾರಣೆಗೆ ತೆರಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೇನೂ ತಪ್ಪು ಮಾಡಿಲ್ಲ, ರೇಪು ಮಾಡಿಲ್ಲ, ದುಡ್ಡು ಕದ್ದಿಲ್ಲ. ರಾಜಕೀಯವಾಗಿ ನಮ್ಮ ಪಕ್ಷದ ಶಾಸಕರನ್ನು ರಕ್ಷಣೆ ಮಾಡಲು ಅವರನ್ನು ಹಿಡಿದಿಟ್ಟಿದ್ವಿ. ಹೀಗಾಗಿ ಅದಕ್ಕಾಗಿ ಈಗ ಬೇಕಾದಷ್ಟು ಅನುಭವಿಸುತ್ತಿದ್ದೇವೆ. ಪರವಾಗಿಲ್ಲ ಎಲ್ಲವನ್ನೂ ನಾವು ಫೇಸ್ ಮಾಡಬೇಕು ಎಂದು ಹೇಳಿದ್ದಾರೆ.
ಏನಾದರೂ, ಯಾರಿಗಾದರೂ ಒಳ್ಳೆಯದು ಮಾಡಲು ಹೊರಟಾಗ ಈ ರೀತಿ ಆಗುತ್ತದೆ. ಗುರುವಾರ ನಾವು ಹಾಕಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ಗುರುವಾರ ರಾತ್ರಿ 9.40ಕ್ಕೆ ನನಗೆ ಸಮನ್ಸ್ ಕೊಟ್ಟು ಒಂದು ಗಂಟೆಗೆ ಬರಬೇಕು ಎಂದು ನೋಟಿಸ್ ನೀಡಿದ್ದಾರೆ. ಅದಕ್ಕೂ ಮೊದಲು ಪ್ರೆಸ್ ಮೀಟ್ ಮಾಡಿ ಮಾತಾಡೇ ದೆಹಲಿಗೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ