ಸ್ಟೀಲ್ ಬ್ರಿಡ್ಜ್ ಯೋಜನೆಯಲ್ಲಿ ಒಂದೇ ಒಂದು ರೂ ಪಡೆದಿದ್ರೆ ದಾಖಲೆ ಕೊಡಿ ಎಂದು ವಿಪಕ್ಷಗಳಿಗೆ ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಸವಾಲ್ ಹಾಕಿದ್ದಾರೆ.
ಟ್ರಾಫಿಕ್ ಸಮಸ್ಯೆ ನಿವಾರಣೆಯಾಗಲಿ. ಜನತೆಗೆ ಒಳ್ಳೆಯದಾಗಲಿ ಎಂದು ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಆದರೆ, ಆರೋಪ ಪ್ರತ್ಯಾರೋಪಗಳ ಹಿನ್ನೆಲೆಯಲ್ಲಿ ಸರಕಾರ ಸ್ಟೀಲ್ ಬ್ರಿಡ್ಜ್ ಯೋಜನೆ ರದ್ದುಗೊಳಿಸಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಶಾಸಕರು ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ರದ್ದುಗೊಳಿಸುವಂತೆ ಒಕ್ಕೊರಲದಿಂದ ಒತ್ತಾಯಿಸಿದರು. ಸ್ಟೀಲ್ ಬ್ರಿಡ್ಜ್ ಆರೋಪಗಳಿಂದ ಮುಜುಗರವಾಗುತ್ತಿದೆ. ಕೂಡಲೇ ಅದನ್ನು ಸ್ಥಗಿತಗೊಳಿಸಿ ಎಂದು ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಒತ್ತಾಯಿಸಿದರು.
ಸ್ಟೀಲ್ ಬ್ರಿಡ್ಜ್ ಯೋಜನೆಯಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬದವರು 69 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.