Publish Date: Fri, 23 Jun 2023 (16:17 IST)
Updated Date: Fri, 23 Jun 2023 (16:18 IST)
ಬೆಂಗಳೂರು : ಮುಖ್ಯಮಂತ್ರಿಗಳ ಜೊತೆ ಮಾತನಾಡಿ ನಾನೇ ಗೃಹಲಕ್ಷ್ಮಿಯನ್ನ ಸ್ವಲ್ಪ ಹೋಲ್ಡ್ ಮಾಡಿಸಿದ್ದೇನೆ. ಗಲಾಟೆ ಕಡಿಮೆ ಮಾಡಲು ಹೀಗೆ ಮಾಡಿದ್ದೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆ ವಿಳಂಬ ವಿಚಾರಕ್ಕೆ ನಗರದಲ್ಲಿಂದು ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಗೃಹಲಕ್ಷ್ಮಿಯನ್ನ ನಾನೇ ಸ್ವಲ್ಪ ಹೋಲ್ಡ್ ಮಾಡಿಸಿದ್ದೇನೆ. ಗಲಾಟೆ ಕಡಿಮೆ ಮಾಡಲು ಹೀಗೆ ಮಾಡಿದ್ದೇನೆ. ಮಹಿಳಾ ಸಚಿವರೊಂದಿಗೆ ಒಂದು ಸಭೆ ಮಾಡಿ, ಸರಳವಾಗಿ ಯೋಜನೆ ಅನುಷ್ಠಾನ ಮಾಡ್ತೀವಿ. ಭ್ರಷ್ಟಾಚಾರ ರಹಿತ ಯೋಜನೆ ಅನುಷ್ಠಾನಕ್ಕೆ ತರುತ್ತೇವೆ ಎಂದು ಹೇಳಿದ್ದಾರೆ.
ಅರ್ಜಿಯನ್ನ ಪ್ರತಿಯೊಬ್ಬರೂ ಉಚಿತವಾಗಿ ಸಲ್ಲಿಸುವಂತೆ ಮಾಡಿಕೊಡಬೇಕು. ಯಾರಾದ್ರೂ ಸಂಘ ಸಂಸ್ಥೆಗಳು ಹಣ ವಸೂಲಿ ಮಾಡಿದ್ರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅವರ ಏಜೆನ್ಸಿಯನ್ನೇ ರದ್ದು ಮಾಡ್ತೀವಿ. ಈ ಸ್ಕೀಮ್ಗಳಲ್ಲಿ ಯಾರೊಬ್ಬರಿಗೂ ಲಂಚ ಕೊಡಬಾರದು. ಒಂದು ವೇಳೆ ಲಂಚ ಕೇಳಿದ್ರೆ ನಾವು ಒಂದು ಸಹಾಯವಾಣಿ ಸಂಖ್ಯೆ ಕೊಡ್ತೀವಿ, ಅದಕ್ಕೆ ಕಾಲ್ ಮಾಡಿ ದೂರು ಕೊಡಿ ಎಂದು ಸಲಹೆ ನೀಡಿದ್ದಾರೆ.