Publish Date: Fri, 10 Jun 2022 (17:39 IST)
Updated Date: Fri, 10 Jun 2022 (17:41 IST)
ಐ ಲವ್ ಕಾಂಗ್ರೆಸ್ ಅದಕ್ಕೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಿದ್ದೇವೆ ಎಂದು ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಹೇಳಿದ್ದಾರೆ.
ಶುಕ್ರವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಮತದಾನ ಮಾಡಿದ ನಂತರ ಯಾವ ಅಭ್ಯರ್ಥಿಗೆ ಮತ ಚಲಾಯಿಸಿದ್ದೀರಿ ಎಂಬ ಪ್ರಶ್ನೆಗೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿರುವುದಾಗಿ ಹೇಳಿದರು.
ಕಾಂಗ್ರೆಸ್ ಅಭ್ಯರ್ಥಿಗೆ ಯಾಕೆ ಮತ ಹಾಕಿದ್ದೀರಿ ಅಂದರೆ, ಐ ಲವ್ ಕಾಂಗ್ರೆಸ್ ಎಂದು ಹೇಳಿದ್ದಾರೆ. ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಶ್ರೀನಿವಾಸ ಗೌಡ ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಿರುವುದಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದು, ಜೆಡಿಎಸ್ ಚಿಹ್ನೆಯಲ್ಲಿ ಗೆದ್ದು ಬೇರೆ ಪಕ್ಷದವರಿಗೆ ಮತ ಹಾಕಿರುವ ಶ್ರೀನಿವಾಸ ಗೌಡರು ಕಾಂಗ್ರೆಸ್ ಗೆ ಮತ ಹಾಕುತ್ತಾರೆ ಎಂಬುದು ಮೊದಲೇ ಹೇಳಿದ್ದೆ. ಅವರಿಗೆ ಮಾನ ಮರ್ಯಾದೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
geetha
Publish Date: Fri, 10 Jun 2022 (17:39 IST)
Updated Date: Fri, 10 Jun 2022 (17:41 IST)