Publish Date: Fri, 14 Apr 2023 (15:19 IST)
Updated Date: Fri, 14 Apr 2023 (15:27 IST)
ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಇಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮನೆಯಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯದವರೊಂದಿಗೆ ಮಾತನಾಡಿದ್ರು.. ನಾನು ಅಥಣಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ.. ನಾನು ಯಾವುದೇ ರೀತಿಯ ಷರತ್ತು ವಿಧಿಸಿಲ್ಲ, ನನ್ನ ಮಗ, ಪತ್ನಿಗೆ ಟಿಕೆಟ್ ಕೊಡಿ ಎಂದು ಕೇಳಿಲ್ಲ, ನನ್ನ ಕ್ಷೇತ್ರಕ್ಕೆ ಹೆಚ್ಚು ಅನುದಾನ ಕೊಡಿ ಎಂದಿದ್ದೇನೆ ಎಂದು ಹೇಳಿದ್ದಾರೆ.. ನನಗೆ ಬೇರೆಯವರಂತೆ ಪುತ್ರ ವ್ಯಾಮೋಹವಿಲ್ಲ, ನನ್ನ ಕುಟುಂಬದವರಿಗೆ ಟಿಕೆಟ್ ಕೇಳಿಲ್ಲ, ಪರೋಕ್ಷವಾಗಿ ಬಿಜೆಪಿ ನಾಯಕರಿಗೆ ಸವದಿ ತಿರುಗೇಟು ನೀಡಿದ್ದಾರೆ.. ರಮೇಶ್ ಜಾರಕಿಹೊಳಿ ವಿರುದ್ಧವೂ ಸವದಿ ವಾಗ್ದಾಳಿ ನಡೆಸಿದ್ದಾರೆ.