ಸರಕಾರದ ಹಗರಣಗಳನ್ನು ಬಯಲು ಮಾಡ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.
ನಗರದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಸಮೀಕ್ಷಾ ಸಂಸ್ಥೆಯಿಂದ ಭ್ರಷ್ಟಾಚಾರದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ದೊರೆತಿದೆ. ಬರಪರಿಹಾರ ಕಾಮಗಾರಿ ನಿರ್ವಹಣೆಯಲ್ಲೂ ವಿಫಲವಾಗಿದೆ ಎಂದು ಆರೋಪಿಸಿದರು.
ಬಿಬಿಎಂಪಿ, ಲೋಕೋಪಯೋಗಿ ಇಲಾಖೆ, ಅರ್ಕಾವತಿ ಡಿನೋಟಿಫೈನಲ್ಲೂ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಗಳ ಸುರಿಮಳೆಗೈದರು.
ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆದು ರಾಜ್ಯ ಪ್ರವಾಸಕ್ಕೆ ಹೊರಡುತ್ತೇನೆ. ಮೊದಲ ಹಂತದಲ್ಲಿ ಜಗದೀಶ್ ಶೆಟ್ಟರ್ ಮತ್ತು ಆರ್.ಅಶೋಕ್ ಅವರು ಸಾಥ್ ನೀಡಲಿದ್ದಾರೆ. ಪ್ರತಿದಿನ ಸಂಜೆ ಸಾರ್ವಜನಿಕ ಸಭೆ ನಡೆಸುತ್ತೇನೆ ಎಂದರು.
ಒಂದೊಂದು ಕ್ಷೇತ್ರದಲ್ಲಿ ಮೂವರು ಆಕಾಂಕ್ಷಿಗಳಿದ್ದಾರೆ. ಮತ್ತೊಂದು ಬಾರಿ ಸಮೀಕ್ಷೆ ನಡೆಸಿ ಸೂಕ್ತ ಗೆಲ್ಲುವ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತೇವೆ. ಹೈಕಮಾಂಡ್ ಸೂಕ್ತ ಅಭ್ಯರ್ಥಿಗೆ ಮಾತ್ರ ಟಿಕೆಟ್ ನೀಡಲಿದೆ ಎಂದು ಹೇಳಿದ್ದಾರೆ.
ಗ್ರಾಮಾಭಿವೃದ್ಧಿ ಇಲಾಖೆಯಲ್ಲಿ ಸಾವಿರಾರು ಕೋಟಿ ರೂಪಾಯಿಗಳಿಗೆ ಲೆಕ್ಕವೇ ಇಲ್ಲ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಎಲ್ಲಾ ಕ್ಷೇತ್ರಗಳಲ್ಲಿ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.