ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ ಚಟುವಟಿಕೆಗಳಿಗೆ ಯಾವ ತೊಡಕೂ ಇಲ್ಲ. ಬಿಜೆಪಿ ರಾಷ್ಟ್ರೀಯ ನಾಯಕರ ಸೂಚನೆ ಮೇರೆಗೆ ನಾಳೆ ತುಮಕೂರಿನಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಬ್ರಿಗೇಡ್ ನನಗೆ ಮುಖ್ಯ ಎಂದು ಹೇಳಿದರು.
ಬ್ರಿಗೇಡ್ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಜೊತೆ ಮುಖಾಮುಖಿ ಚರ್ಚೆ ನಡೆಸುವಂತೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್‌ಲಾಲ್ ಸೂಚನೆ ನೀಡಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿರುವ ನಾನು ನಾಯಕರ ಸೂಚನೆಗೆ ತಲೆಬಾಗಿ ತುಮಕೂರಿನಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ