ಶಿವಮೊಗ್ಗದಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಆಯನೂರು ಮಂಜುನಾಥ, ನಗರ ಕ್ಷೇತ್ರದಿಂದ ನಾನೇ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪಗೆ ಸೆಡ್ಡು ಹೊಡೆದಿದ್ದಾರೆ.
ಈಶ್ವರಪ್ಪ ಅವರಿಗೆ ಮುಂದೆ ನನ್ನ ಮನೆಗೆ ಬರುವಂತಹ ಸ್ಥಿತಿ ನಿರ್ಮಾಣವಾಗಲಿದೆ. ಆವಾಗ ನಾನು ಯಾರು ಎನ್ನುವುದನ್ನು ಪರಿಚಯಿಸುತ್ತೇನೆ ಎಂದು ಸವಾಲ್ ಹಾಕಿದ್ದಾರೆ.
ಬ್ರಿಗೇಡ್ ಬಗ್ಗೆ ದಿನಕ್ಕೊಂದು ಹೇಳಿಕೆ. ಅವರ ಹೇಳಿಕೆಗೆ ಅವರೇ ಬದ್ಧರಾಗಿರುವುದಿಲ್ಲ. ಅವರ ಪುತ್ರ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದಾಗ ನನ್ನ ಅವಶ್ಯಕತೆಯಿತ್ತು. ಇದೀಗ ನಾನು ಯಾರು ಎನ್ನುವುದು ಮರೆತುಹೋಗಿದೆ ಎಂದು ವಾಗ್ದಾಳಿ ನಡೆಸಿದರು.
ಬಿಎಸ್ವೈ ಜೊತೆ ನನ್ನ ಸಂಬಂಧ ಎಂತದ್ದು ಎಂದು ಅವರಿಗೆ ಗೊತ್ತಿಲ್ಲ. ಆದ್ದರಿಂದ ಮನಬಂದಂತೆ ಹೇಳಿಕೆ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು. ಕೆ.ಎಸ್.ಈಶ್ವರಪ್ಪಗೆ 70 ವರ್ಷವಾಗಿದ್ದರಿಂದ ಮರೆವು ಶುರುವಾಗಿದೆ ಎಂದು ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ಲೇವಡಿ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.