ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧಿಸುವುದು ಖಚಿತ ಎಂದು ಜೆಡಿಎಸ್ ಬಂಡಾಯ ಶಾಸಕ ಮಾಗಡಿ ಬಾಲಕೃಷ್ಣ ಹೇಳಿದ್ದಾರೆ.
ಸದ್ಯ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದಕ್ಕೆ ಕಾನೂನಿನ ತೊಡಕಿರುವುದರಿಂದ ಸದ್ಯಕ್ಕೆ ಸೇರ್ಪಡೆಯಾಗುತ್ತಿಲ್ಲ.ಕಾನೂನು ತೊಡಕು ಸರಿಪಡಿಸಿಕೊಂಡು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದು ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ,ಪರಮೇಶ್ವರ್ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದಾರೆ. ನಾವೆಲ್ಲಾ ಜೆಡಿಎಸ್ನ ಏಳು ಬಂಡಾಯ ಶಾಸಕರು ಒಗ್ಗಟ್ಟಾಗಿದ್ದೇವೆ ಎಂದರು.
ಕಳೆದ ರಾಜ್ಯಸಭೆ ಚುನಾವಣೆಯಲ್ಲಿ ವಿಪ್ ಉಲ್ಲಂಘಿಸಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತಹಾಕಿದ ಹಿನ್ನೆಲೆಯಲ್ಲಿ ಏಳು ಬಂಡಾಯ ಶಾಸಕರನ್ನು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಪಕ್ಷದಿಂದ ಉಚ್ಚಾಟಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.