ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧಿತರಾಗಿರುವ ಹಿರಿಯ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಬಂಧನಕ್ಕೂ ಸರ್ಕಾರಕ್ಕೂ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಸುಪ್ರೀಂಕೋರ್ಟ್ ಆದೇಶದಂತೆ ವಿಶೇಷ ತನಿಖಾ ತಂಡ ಹಿರಿಯ ಐಎಎಸ್ ಅಧಿಕಾರಿ ಬಡೇರಿಯಾರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ. ವಿಚಾರಣೆಯಲ್ಲಿ ತಪ್ಪಿತಸ್ಥರೆಂದು ಕಂಡು ಬಂದಲ್ಲಿ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರ ಲೋಕಾಯುಕ್ತ ವರದಿಯಲ್ಲಿ ಬಡೇರಿಯಾ ಹೆಸರು ಉಲ್ಲೇಖವಾಗಿದ್ದರಿಂದ ಎಸ್‌ಟಿಎಫ್ ತಂಡ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.
ಜಂತಕಲ್ ಮೈನಿಂಗ್ ಸೇರಿದಂತೆ ಯಾವುದೇ ಅಕ್ರಮ ಗಣಿಗಾರಿಕೆಯಲ್ಲಿ ಪಾಲ್ಗೊಂಡವರೊಂದಿಗೆ ಸರಕಾರದ ಸಂಬಂಧವಿಲ್ಲ. ಒಂದು ವೇಳೆ ಯಾರೇ ತಪ್ಪಿತಸ್ಥರು ಎಂದು ಕಂಡಬಂದಲ್ಲಿ ಅಂತಹ ಅದಿಕಾರಿ ವಿರುದ್ಧ ಕಠಿಣ ಕ್ರಮ ಖಚಿತ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.