Publish Date: Mon, 06 Jun 2022 (14:13 IST)
Updated Date: Mon, 06 Jun 2022 (15:14 IST)
ಮೈಸೂರು : ಸಿಎಂ ಇಬ್ರಾಹಿಂಗೆ ಮಾನ ಮರ್ಯಾದೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.
ರಾಜ್ಯಸಭೆ ಚುನಾವಣೆಯಲ್ಲಿ ಬಿಎಸ್ವೈ ಸಿದ್ದು ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಸಿಎಂ ಇಬ್ರಾಹಿಂ ಆರೋಪಿಸಿದ್ದರು. ಈ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಸಿಎಂ ಇಬ್ರಾಹಿಂಗೆ ಮಾನ ಮರ್ಯಾದೆ ಇಲ್ಲ.
ಅವನು ಜೆಡಿಎಸ್ನಲ್ಲಿ ಕ್ಯಾಪ್ಟೀವ್ ಪ್ರೆಸಿಡೆಂಟ್ ಇದ್ದಂತೆ. ಕುಳಿತುಕೋ ಎಂದರೆ ಕುಳಿತುಕೊಳ್ಳಬೇಕು. ನಿಂತುಕೋ ಅಂದರೆ ನಿಂತುಕೊಳ್ಳಬೇಕು. ಎಂಎಲ್ಸಿ ಮಾಡುತ್ತೇವೆ ಅಂತ ಹೇಳಿ ಕರೆದುಕೊಂಡು ಹೋದರು.
ಎಂಎಲ್ಸಿ ಮಾಡಿದ್ದಾರಾ? ಏನೋ ಒಂದು ಹುದ್ದೆ ಕೊಟ್ಟಿದ್ದಾರೆ ಅಂತ ಬಾಯಿಗೆ ಬಂದಂತೆ ಮಾತನಾಡುತ್ತಾನೆ ಲೇವಡಿ ಮಾಡಿದ್ದಾರೆ.
ರಾಜ್ಯಸಭಾ ಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ನಮ್ಮ ಗೆಲುವಿಗೆ ಎಷ್ಟು ಮತ ಬೇಕೋ ಅಷ್ಟು ಆತ್ಮಸಾಕ್ಷಿಯ ಮತಗಳು ಜೆಡಿಎಸ್, ಬಿಜೆಪಿಯಿಂದ ಕಾಂಗ್ರೆಸ್ಗೆ ಬಂದೇ ಬರುತ್ತದೆ. ಜೆಡಿಎಸ್ಗೆ ಈಗಲೂ ಬಿಜೆಪಿ ಗೆಲ್ಲಬಾರದು ಎಂಬ ಇಚ್ಛೆ ಇದ್ದರೆ ಅವರ ಅಭ್ಯರ್ಥಿಯನ್ನು ಕಣದಿಂದ ನಿವೃತ್ತಿ ಮಾಡಿಸಲಿ.
ನಾವು ಅನೇಕ ಬಾರಿ ಜೆಡಿಎಸ್ಗೆ ನೆರವಾಗಿಲ್ಲವಾ? ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸುವಾಗ ನಾವು ಬೆಂಬಲಿಸಲಿಲ್ಲವಾ? ಮೂವತ್ತೇಳು ಸ್ಥಾನ ಇದ್ದ ಜೆಡಿಎಸ್ಗೆ ನಾವು ಸಿಎಂ ಸ್ಥಾನ ಕೊಡಲಿಲ್ಲವಾ? ಹೀಗೆ ಹಲವು ಬಾರಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ನಾವು ಜೆಡಿಎಸ್ಗೆ ಸಹಕಾರ ಕೊಟ್ಟಿದ್ದೇವೆ.
ಈಗ ಅಲ್ಪಸಂಖ್ಯಾತರೊಬ್ಬರು ಗೆಲ್ಲಲು ಜೆಡಿಎಸ್ ತನ್ನ ಅಭ್ಯರ್ಥಿಯ ನಿವೃತ್ತಿ ಘೋಷಿಸಲಿ. ಪ್ರತಿ ಬಾರಿಯೂ ಜೆಡಿಎಸ್ ಯಾಕೆ ಗೆಲ್ಲಬೇಕು ಎಂದು ಪ್ರಶ್ನಿಸಿದ್ದಾರೆ.
Ramya kosira
Publish Date: Mon, 06 Jun 2022 (14:13 IST)
Updated Date: Mon, 06 Jun 2022 (15:14 IST)