ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಿನ್ನೆ ನಡೆದ ಸರ್ವಪಕ್ಷ ಸಭೆಯನ್ನು ಬಿಜೆಪಿ ಬಹಿಷ್ಕರಿಸಿದೆ. ಆದರೆ, ನಾಳೆ ನಡೆಯುವ ಒಂದು ದಿನದ ವಿಶೇಷ ಅಧಿವೇಶನವನ್ನು ಬಿಜೆಪಿಯವರು ಬಹಿಷ್ಕರಿಸಿದರೇ, ಅವರನ್ನು ಕಾವೇರಿ ಜಲಾನಯನ ಭಾಗದಲ್ಲಿ ಓಡಾಡಲು ಸಹ ಬಿಡುವುದಿಲ್ಲ ಎಂದು ರೈತ ಮುಖಂಡ ಕೆ.ಎಸ್.ನಂಜುಂಡೇಗೌಡ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪುನಿಂದ ರಾಜ್ಯಕ್ಕೆ ಮತ್ತೆ ಅನ್ಯಾಯವಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ನಡೆಯಲಿರುವ ಒಂದು ದಿನದ ವಿಶೇಷ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಕ್ತ ನಿರ್ಧಾರ ಕೈಗೊಳ್ಳಲಿ. ಅಧಿವೇಶನದಲ್ಲಿ ಒಬ್ಬರ ಮೇಲೊಬ್ಬರು ಆರೋಪ ಮಾಡುವುದು ಬೇಡ ಎಂದು ಮನವಿ ಮಾಡಿಕೊಂಡಿದ್ದಾರೆ.
ವಿಧಾನಸೌಧದಲ್ಲಿ ಇರುವವರೆಲ್ಲರೂ ರೌಡಿಗಳೆ. ಹೀಗಾಗಿ ಇಂದು ಕಾವೇರಿ ನದಿ ನೀರಿಗೆ ಈ ಗತಿ ಬಂದಿದೆ ಎಂದು ರೈತ ಮುಖಂಡ ಕೆ.ಎಸ್.ನಂಜುಂಡೇಗೌಡ ಕಿಡಿಕಾರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ