ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡುವಂತೆ ಮತ್ತೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಕಾವೇರಿ ಜಲಾಶಯದಿಂದ ನೀರು ಬಿಡಬೇಡಿ ಎಂದು ಹೇಳಿದ್ದೇನೆ. ನೀರು ಬಿಟ್ರೇ ಸಿಎಂ ಸಿದ್ದರಾಮಯ್ಯನ ಹೊಡೀತೀವಿ ಎಂದು ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ ಮಾದೇಗೌಡ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಹಾಗೂ ರೆಬಲ್‌ಸ್ಟಾರ್ ಅಂಬರೀಶ್ ವಿಚಾರವನ್ನು ನನ್ನ ಕೇಳಲೇ ಬೇಡಿ. ಅಂಬರೀಶ್ ಹಾಗೂ ಮಾಜಿ ಸಂಸದೆ ರಮ್ಯಾರನ್ನು ಹುಡುಕಿ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ನೀವೇ ಕೇಳಿ. ಈ ಇಬ್ಬರಿಗೂ ಮಂಡ್ಯಗೆ ಬರದೇ ಅವಿತುಕೊಂಡು ಕುಳಿತುಕೊಳ್ಳಿ ಎಂದು ನಾನು ಹೇಳಿದ್ದೇನಾ ಎಂದು ಆಕ್ರೋಶದಿಂದ ಪ್ರಶ್ನಿಸಿದರು.
ಕರ್ನಾಟಕ ಸರಕಾರ ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸದ ಸುಪ್ರೀಂಕೋರ್ಟ್, ಕಾವೇರಿ ನದಿಯಿಂದ ಮೂರು ದಿನಗಳ ಕಾಲ ಒಟ್ಟು 18 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಉದಯ್ ಲಲಿತ್ ನೇತೃತ್ವದ ದ್ವಿಸದಸ್ಯ ಪೀಠ ಆದೇಶ ನೀಡಿದೆ.
ಸುಪ್ರೀಂಕೋರ್ಟ್ ಆದೇಶ ಉಲ್ಲಂಘಿಸಿದರೂ ಪರವಾಗಿಲ್ಲ. ಯಾವುದೇ ಕಾರಣಕ್ಕೂ ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡಬೇಡಿ ಎಂದು ಮನವಿ ಮಾಡಿಕೊಂಡಿದ್ದೇನೆ. ಒಂದು ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನೀರು ಹರಿಸಿದರೇ ಅವರನ್ನು ಹೊಡೀತೀವಿ ಎಂದು ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ ಮಾದೇಗೌಡ ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ