ಬೆಂಗಳೂರು : ಕರ್ನಾಟಕದಲ್ಲಿ ಔಷಧ, ಆಕ್ಸಿಜನ್ ಕೊರತೆ ಆಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಕೊರೊನಾ ದೃಢಪಟ್ಟರೆ ಆಂತಕಕ್ಕೊಳಗಾಗುವುದು ಬೇಡ. ಶೇ.90ರಷ್ಟು ಸೋಂಕಿತರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಅಗತ್ಯವಿಲ್ಲ. ಸೋಂಕಿತರು ತಮ್ಮ ಮನೆಯಲ್ಲೇ ಚಿಕಿತ್ಸೆ ಪಡೆಯಬಹುದು ಎಂದು ಹೇಳಿದ್ದಾರೆ.
ಅಲ್ಲದೇ ವಿಕ್ಟೋರಿಯಾ ಆಸ್ಪತ್ರೆಯ ಹೊಸ ಕಟ್ಟಡದಲ್ಲಿ 500 ಬೆಡ್ ವ್ಯವಸ್ಥೆ ಮಾಡಲಾಗಿದೆ. ಇದನ್ನು ಕೊರೊನಾ ಸೋಂಕಿತರ ಚಿಕಿತ್ಸೆಗೆ ಮೀಸಲಿಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.