ನವದೆಹಲಿ : ಕಾರ್ಯಾಧ್ಯಕ್ಷ ಹುದ್ದೆ ಸೃಷ್ಟಿಯ ಬಗ್ಗೆ ಭಾರೀ ಗೊಂದಲ ಮೂಡಿದ್ದು,ಈ ನಡುವೆ ನನಗೆ ಕಾರ್ಯಾಧ್ಯಕ್ಷ ಹುದ್ದೆ ನೀಡಿದರೆ ನಿಭಾಯಿಸುತ್ತೇನೆ ಎಂದು ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ.
4 ಕಾರ್ಯಾಧ್ಯಕ್ಷ ಹುದ್ದೆ ಸೃಷ್ಟಿಸುವಂತೆ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದು, ಪರಿಶಿಷ್ಟ ಪಂಗಡದಿಂದ ಸತೀಶ್ ಜಾರಕಿಹೊಳಿ, ಅಲ್ಪಸಂಖ್ಯಾತ ಕೋಟಾದಿಂದ ಯುಟಿ ಖಾದರ್ ಅಥವಾ ಜಮೀರ್ ಅಹ್ಮದ್, ಉಳಿದಂತೆ ಹಾಲಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಯನ್ನ ಮುಂದುವರಿಸಿ, ಎಂಬಿ ಪಾಟೀಲ್ ರನ್ನ ಸಿಎಲ್ ಪಿ ಲೀಡರ್ ಮಾಡಿ , ನನಗೆ ವಿಪಕ್ಷ ನಾಯಕ ಸ್ಥಾನವೊಂದೇ ಸಾಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷರು ಯಾರೇ ಆದರೂ ಅವರು ನಮ್ಮವರು, ಡಿಕೆಶಿ ಅಧ್ಯಕ್ಷರಾದ್ರೆ ಅವರ ಜತೆ ಕೆಲಸ ಮಾಡುತ್ತೇನೆ. ಹೈಕಮಾಂಡ್ ನಿರ್ಧಾರವನ್ನು ಒಪ್ಪಲೇಬೇಕಾಗುತ್ತದೆ. ಯಾವುದೇ ಪಕ್ಷದಲ್ಲಿ ಗುಂಪುಗಾರಿಕೆ ಸಾಮಾನ್ಯ. ನನಗೆ ಕಾರ್ಯಾಧ್ಯಕ್ಷ ಹುದ್ದೆ ನೀಡಿದರೆ ನಿಭಾಯಿಸುತ್ತೇನೆ ಎಂದು ಹೇಳಿದ್ದಾರೆ. ಅಲ್ಲದೇ ಸತೀಶ್ ಜಾರಕಿಹೊಳಿ ಕಾರ್ಯಾಧ್ಯಕ್ಷ ಹುದ್ದೆಗೆ ಲಾಬಿ ನಡೆಸುತ್ತಿದ್ದು, ದೆಹಲಿಯಲ್ಲಿ ವರಿಷ್ಠರ ಭೇಟಿಗೆ ಮುಂದಾಗಿದ್ದಾರೆ ಎಂಬ ಮಾತು ಕೇಳಿಬಂದಿದೆ.