ಹಾವೇರಿ : ಯಾವ ಜನ್ಮದ ಋಣವೋ ನನಗೆ ಗೊತ್ತಿಲ್ಲ, ನಾನು ಬಂದಾಗ ಪ್ರೀತಿ ವಿಶ್ವಾಸ ತೋರಿಸಿದ್ದೀರಿ. ನಾನು ಸತ್ತ ಮೇಲೆ ನನ್ನ ಅಂತ್ಯಕ್ರಿಯೆ ಇದೇ ಕ್ಷೇತ್ರದಲ್ಲಿ ಮಾಡಬೇಕು, ಇದೇ ಮಣ್ಣಿನಲ್ಲಿ ಹೂಳಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಭಾವುಕ ನುಡಿಗಳನ್ನಾಡಿದರು.
ಹಾವೇರಿ ಜಿಲ್ಲೆ ಶಿಗ್ಗಾಂವಿ ಬಾಡ ಗ್ರಾಮದಲ್ಲಿ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಈಗಾಗಲೇ ಆಯುರ್ವೇದ ಕಾಲೇಜು, ಟೈಕ್ಸಟೈಲ್ ಪಾರ್ಕ್ ನಿರ್ಮಾಣ ಮಾಡಲಾಗಿದೆ.
ಮನೆ-ಮನೆಗೆ ಹೋಗಿ ಕಂದಾಯ ದಾಖಲೆಗಳನ್ನ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆರ್.ಅಶೋಕ್ ಗ್ರಾಮದ ವಾಸ್ತವ್ಯ ಮಾಡಿದ ಗ್ರಾಮಗಳಿಗೆ ಒಂದು ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ನನ್ನ ಜೀವನದ ಕೊನೆಯ ಉಸಿರಿರುವವರೆಗೆ ನಿಮ್ಮ ಸೇವೆ ಮಾಡುತ್ತೇನೆ. ಏನಪ್ಪಾ, ನಮ್ಮ ಸಾಹೇಬರು ದೂರ ಆಗಿಬಿಟ್ಟರು ಎಂದು ನಿಮಗೆ ಅನ್ನಿಸಿರಬಹುದು. ಆದರೆ ನನ್ನ ಹೃದಯ ಇಲ್ಲೇ ಇರುತ್ತದೆ ಎಂದು ಬೊಮ್ಮಾಯಿ ಅವರು ಭಾವುಕರಾದರು.