Webdunia - Bharat's app for daily news and videos

Install App

ನಾನು ಮುಖ್ಯಮಂತ್ರಿಯಾಗಿದ್ದರೇ ನೀರು ಬಿಡುತ್ತಿರಲಿಲ್ಲ, ರಾಜೀನಾಮೆ ನೀಡ್ತಿದ್ದೆ: ಯಡ್ಡಿ ಗುಡುಗು

Webdunia
ಸೋಮವಾರ, 19 ಸೆಪ್ಟಂಬರ್ 2016 (16:44 IST)
ನಾನು ರಾಜ್ಯದ ಮುಖ್ಯಮಂತ್ರಿಯಾಗಿದ್ದರೇ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡುತ್ತಿರಲಿಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ರೈತರ ಪರ ಹೋರಾಡುತ್ತಿದ್ದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟಾಂಗ್ ನೀಡಿದ್ದಾರೆ. 
 
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ವಾಸ್ತವ ಸ್ಥಿತಿಯನ್ನು ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಿಕೊಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದ್ದು, ರಾಜ್ಯದಲ್ಲಿ ಕುಡಿಯುವ ನೀರಿಗೂ ಅಭಾವವಿದೆ. ಈ ವೇಳೆ ತಮಿಳುನಾಡಿಗೆ ನೀರು ಬಿಡುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು. 
 
ಇನ್ನು, ಪ್ರಧಾನಿ ಫಸಲ್ ವಿಮಾ ಯೋಜನೆ ಅಡಿಯಲ್ಲಿ ಪ್ರತಿ ಎಕರೆಗೆ ಐದು ಸಾವಿರಕ್ಕೂ ಕಡಿಮೆ ವಿಮೆ ಹಣ ಲಭಿಸುತ್ತಿದ್ದು, ಸಂಪೂರ್ಣ ಬೆಳೆ ನಷ್ಟವಾದಾಗಲೂ ಸಹ ರೈತರಿಗೆ ಕಡಿಮೆ ವಿಮಾ ಹಣ ಲಭಿಸುತ್ತದೆ. ಇದರಿಂದ ರೈತರಿಗೆ ಯಾವುದೇ ಅನುಕೂಲವಾಗುತ್ತಿಲ್ಲ ಎಂದು ಯೋಜನೆ ಕುರಿತು ಭ್ರಮೆಯಲ್ಲಿದ್ದೆ. ಆದರೆ, ಸಂವಾದದಲ್ಲಿ ಪಾಲ್ಗೊಂಡ ಬಳಿಕ ಯೋಜನೆ ಕುರಿತು ಸಂಪೂರ್ಣವಾಗಿ ಅರಿವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments