ಡಿವೈಎಸ್‌ಪಿ ಎಂ.ಕೆ.ಗಣಪತಿ ಸಾವಿಗೆ ನ್ಯಾಯ ಮುಖ್ಯವೋ ರಾಜೀನಾಮೆ ಮುಖ್ಯವೋ ಎಂದು ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಪ್ರಶ್ನಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪದೇ ಪದೇ ರಾಜೀನಾಮೆ ಕೇಳುತ್ತಿರುವುದು ಯಾವ ನ್ಯಾಯ? ಎಂ.ಕೆ.ಗಣಪತಿ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳ ಒತ್ತಡ ಹೇರಲಾಗುತ್ತದೆ ಎನ್ನುವ ಆರೋಪಿಗಳಿಂದಾಗಿ ಈಗಾಗಲೇ ನಾನು ಒಂದು ಬಾರಿ ರಾಜೀನಾಮೆ ನೀಡಿದ್ದೇನೆ. ಮತ್ತೆ ರಾಜೀನಾಮೆ ಕೇಳುವುದು ಯಾವ ನ್ಯಾಯ ಎಂದು ತಿರುಗೇಟು ನೀಡಿದ್ದಾರೆ.
ಕೇಂದ್ರದಲ್ಲಿ ಅನೇಕ ಬಿಜೆಪಿ ನಾಯಕರುಗಳ ಮೇಲೆ ಸಿಬಿಐ ತನಿಖೆ ನಡೆಯುತ್ತಿದೆ. ಬಿಜೆಪಿ ನಾಯಕರು ಮೊದಲು ಅವರ ರಾಜೀನಾಮೆ ಪಡೆಯಲಿ. ನಂತರ ನನ್ನ ರಾಜೀನಾಮೆ ಕೇಳಲಿ ಎಂದು ತಿರುಗೇಟು ನೀಡಿದ್ದಾರೆ.
ಸುಪ್ರೀಂಕೋರ್ಟ್ ಎಂ,.ಕೆ. ಗಣಪತಿ ಪ್ರಕರಣನ್ನು ಸಿಬಿಐಗೆ ವಹಿಸಿದೆ. ಸಿಬಿಐ ಅಧಿಕಾರಿಗಳು ಮೂರು ತಿಂಗಳಲ್ಲಿ ಸುಪ್ರೀಂಕೋರ್ಟ್‌ಗೆ ವರದಿ ಸಲ್ಲಿಸಲಿದ್ದಾರೆ.ನಾನು ತಪ್ಪಿತಸ್ಥ ಎಂದು ಸಾಬೀತಾದಲ್ಲಿ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದ ಎಂದು ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಘೋಷಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.