ಬಿಜೆಪಿ ಸೇರಲು ಮುಂದಾಗಿರುವ ಕೆ.ಪಿ.ನಂಜುಂಡಿ ಭಿಕ್ಷೆ ಬೇಡಲು ಮುಂದಾಗಿದ್ದಾರೆ. ಒಂದು ವೇಳೆ ಅವರಿಗೆ ತಾಕತ್ತಿದ್ರೆ ನನ್ನ ವಿರುದ್ಧ ಸ್ಪರ್ಧಿಸಲಿ ಎಂದು ವಿಧಾನಪರಿಷತ್ ಸದಸ್ಯ ರಘು ಆಚಾರ್ ಗುಡುಗಿದ್ದಾರೆ.
ನಾನು ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು ಬಂದಿದ್ದೇನೆ. ಹಿಂಬಾಗಿಲಿನಿಂದ ಬಂದಿಲ್ಲ. ಮುಂಬರುವ 2018ರ ಚುನಾವಣೆಯಲ್ಲಿ ಬೇಕಾದ್ರೆ ನಂಜುಂಡಿ ನನ್ನ ವಿರುದ್ಧ ಸ್ಪರ್ಧಿಸಲಿ ಎಂದು ಸವಾಲ್ ಹಾಕಿದ್ದಾರೆ.
ವಿಧಾನಪರಿಷತ್ ಸದಸ್ಯನಾಗಿ ಆಯ್ಕೆಯಾಗಬೇಕು ಎನ್ನುವ ಆಸೆಯಿಂದ ಜೈಲಿಗೆ ಹೋದವರೊಂದಿಗೆ ನಂಜುಂಡಿ ಸೇರ್ಪಡೆಯಾಗಿದ್ದಾರೆ. ಮುಂದೆ ನಂಜುಂಡಿಯೂ ಜೈಲಿಗೆ ಹೋಗಬಹುದು ಎಂದು ಲೇವಡಿ ಮಾಡಿದ್ದಾರೆ.
ನಾನು ಯಾವ ಸ್ವಾಮಿಜಿಯವರಿಗೂ ಬೆದರಿಕೆ ಹಾಕಿಲ್ಲ. ಸ್ವಾಮಿಜಿಗಳು ಯಾವತ್ತೂ ಒಬ್ಬ ವ್ಯಕ್ತಿಯ ಪರವಾಗಿ ನಿಂತಿಲ್ಲ. ನನ್ನ ಸಮುದಾಯ ನಾಯಕತ್ವ ವಹಿಸಿಕೊಳ್ಳುವಂತೆ ಕೋರಿದೆ. ಕೆ.ಪಿ.ನಂಜುಂಡಿಯವರನ್ನು ಸಮುದಾಯ ತಿರಸ್ಕರಿಸಿದ್ದರಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ರಘು ಆಚಾರ್ ತಿರುಗೇಟು ನೀಡಿದ್ದಾರೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.