ಭ್ರಷ್ಟಾಚಾರ ಆರೋಪ ಹೊರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕ ಸರ್ಕಾರವನ್ನು ವಜಾಗೊಳಿಸಿ, ಭ್ರಷ್ಟರ ವಿರುದ್ಧ ಪ್ರಕರಣ ದಾಖಲಿಸಬೇಕು. ಇಲ್ಲದಿದ್ದರೆ ಕ್ಷಮೆ ಕೋರಬೇಕು ಎಂದು ಕಾಂಗ್ರೆಸ್ ವಕ್ತಾರ ವಿ.ಎಸ್.ಉಗ್ರಪ್ಪ ಆಗ್ರಹಿಸಿದ್ದಾರೆ.
ನರೇಂದ್ರಮೋದಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಭ್ರಷ್ಟಾಚಾರ ನಡೆದಿರುವ ಬಗ್ಗೆ ಮಾಹಿತಿಯಿದ್ದರೆ ಸರ್ಕಾರವನ್ನೇಕೆ ವಜಾಗೊಳಿಸಿ, ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.
ದಾಖಲೆಯಿದ್ದರೆ ಜನತೆಯ ಮುಂದೆ ಇಡಬೇಕು. ಆಧಾರ ರಹಿತ ಆರೋಪ ಮಾಡಿ ಹುದ್ದೆಯ ಘನತೆಗೆ ಧಕ್ಕೆ ತರಬಾರದು ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.