Webdunia - Bharat's app for daily news and videos

Install App

ಅಧಿಕಾರಕ್ಕೆ ಬಂದ್ರೆ ಸಿಎಂ ಸಿದ್ರಾಮಯ್ಯರನ್ನು ಜೈಲಿಗೆ ಕಳಿಸ್ತೇನೆ: ಯಡಿಯೂರಪ್ಪ

Webdunia
ಸೋಮವಾರ, 20 ಫೆಬ್ರವರಿ 2017 (13:14 IST)
ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ 24 ಗಂಟೆಗಳಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಕುಟುಂಬದವರ ವಿರುದ್ಧ ತನಿಖೆಗೆ ಆದೇಶಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.
 
ಅನೇಕ ಭ್ರಷ್ಟಾಚಾರ ಪ್ರಕರಣಗಳು ನಮ್ಮ ಮುಂದಿವೆ. ಸಿಎಂ ಸಿದ್ದರಾಮಯ್ಯ ಮತ್ತು ಅವರ ಸಹದ್ಯೋಗಿಗಳು ನಡೆಸಿದ ಹಗರಣಗಳ ಬಗ್ಗೆ ತನಿಖೆ ನಡೆಸಿ ಅವರನ್ನು ಜೈಲಿಗೆ ಕಳಿಸುತ್ತೇನೆ ಎಂದು ಅಬ್ಬರಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಐಟಿ ಅಧಿಕಾರಿಗಳಿಗೆ ಪತ್ರ ಬರೆದು ರೈಡ್ ಬಗ್ಗೆ ಯಾರಿಗಾದರೂ ಮಾಹಿತಿ ನೀಡಿದ್ದೀರಾ ಎಂದು ಪತ್ರ ಬರೆದಿದ್ದಾರೆ. ಅವರು ಪತ್ರ ಬರೆದಿರುವುದನ್ನು ನೋಡಿದರೆ ಭ್ರಷ್ಟಾಚಾರದಲ್ಲಿ ಪಾಲ್ಗೊಂಡಿರುವುದು ಸಾಬೀತಾಗುತ್ತದೆ ಎಂದು ಆರೋಪಿಸಿದ್ದಾರೆ.
 
ಯಡಿಯೂರಪ್ಪ ಭ್ರಷ್ಟಾಚಾರಿ, ಜೈಲಿಗೆ ಹೋಗಿ ಬಂದವರು ಎಂದು ಸಿಎಂ ಸಿದ್ದರಾಮಯ್ಯ ಪದೇ ಪದೇ ಲೇವಡಿ ಮಾಡುತ್ತೀದ್ದಾರೆ. ನಾವು ಅಧಿಕಾರಕ್ಕೆ ಬಂದರೆ ಯಾವ ಯಾವ ಜೈಲಿಗೆ ಯಾರನ್ನು ಕಳುಹಿಸಬೇಕು ಎನ್ನುವ ಬಗ್ಗೆ ಚಿಂತನೆ ನಡೆಸುತ್ತೇನೆ ಎಂದು ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments