ಧಮ್ ಇದ್ರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬನ್ನಿ ಎಂದು ಮಾಜಿ ಸಚಿವ ಆರ್.ಅಶೋಕ್ ಕಾಂಗ್ರೆಸ್ ನಾಯಕರಿಗೆ ಸವಾಲ್ ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಮೀಕ್ಷೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಗಳಿಸುತ್ತದೆ ಎನ್ನುವುದನ್ನು ಬಹಿರಂಗಪಡಿಸಲಾಗಿದೆ. ಒಂದು ವೇಳೆ ಬಹುಮತ ದೊರೆಯುವುದೇ ಆದಲ್ಲಿ ಧಮ್ ಇದ್ರೆ ಕೂಡಲೇ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬನ್ನಿ ಎಂದು ಗುಡುಗಿದ್ದಾರೆ.
ಒಂದು ವೇಳೆ, ಸಿಎಂ ಸಿದ್ದರಾಮಯ್ಯ ಸರಕಾರ ವಿಧಾನಸಭೆ ವಿಸರ್ಜಿಸಿ ಚುನಾವಣೆ ಘೋಷಿಸದಿದ್ದರೆ ಚುನಾವಣೆ ಸಮೀಕ್ಷೆ ಭೋಗಸ್ ಎನ್ನುವುದು ಸಾಬೀತಾಗುತ್ತದೆ ಎಂದು ಲೇವಡಿ ಮಾಡಿದ್ದಾರೆ.
ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಕುರಿತಂತೆ ಕ್ಲೀನ್ ಚಿಟ್ ನೀಡಲೆಂದೇ ನ್ಯಾಯಮೂರ್ತಿ ಕೆಂಪಯ್ಯ ಆಯೋಗ ರಚಿಸಲಾಗಿದೆ. ಆದರೆ, ಅರ್ಕಾವತಿ ಬಡಾವಣೆ ಡಿನೋಟಿಫೈ ವಿರುದ್ಧ ಹೋರಾಟ ಮುಂದುವರಿಯಲಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಎಚ್ಚರಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.