Publish Date: Sat, 07 Oct 2017 (17:16 IST)
Updated Date: Sat, 07 Oct 2017 (17:19 IST)
ರಾಜ್ಯ ಸರಕಾರ ಅಕ್ರಮವಾಗಿ ತಮ್ಮ ಕಂಪೆನಿಗೆ ಭೂಮಿ ಮಂಜೂರಾತಿ ಮಾಡಿದೆ ಎನ್ನುವ ಬಿಜೆಪಿ ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸ್ಪಷ್ಟನೆ ನೀಡಿದ್ದಾರೆ.
ಶಾಂತಾ ಇಂಡಸ್ಟ್ರೀಸ್‌ಗೆ ಅಕ್ರಮವಾಗಿ ಭೂಮಿ ಮಂಜೂರು ಮಾಡಲಾಗಿದೆ ಎನ್ನುವ ಆರೋಪ ಸತ್ಯಕ್ಕೆ ದೂರವಾಗಿದೆ. ಆರೋಪಗಳನ್ನು ಮುಂದುವರಿಸಿದ್ದೇ ಆದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಮ್ಯಾಟ್ರಿಕ್ಸ್ ಹಗರಣದ ಬಗ್ಗೆಯೂ ಸ್ಪಷ್ಟನೆ ನೀಡಿದ ಅವರು ಕಳೆದ ವರ್ಷವೇ ಮ್ಯಾಟ್ರಿಕ್ಸ್‌ಗೂ ನನಗೂ ಯಾವುದೇ ಸಂಬಂಧವಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ್ದೇನೆ. ಪದೇ ಪದೇ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ಚಪಡಿಸಿದ್ದಾರೆ.
ಬಿಜೆಪಿ ಮುಖಂಡರು ಕೇವಲ ಚುನಾವಣೆಗಾಗಿ ಇಲ್ಲ ಸಲ್ಲದ ಆರೋಪಗಳನ್ನು ಹೊರಿಸುವುದು ಮುಂದುವರಿಸಿದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಡಾ.ಯತೀಂದ್ರ ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.