Publish Date: Tue, 02 Jun 2020 (21:10 IST)
Updated Date: Tue, 02 Jun 2020 (21:15 IST)
ಪತ್ರಿಕಾ ಹಾಗೂ ವಿದ್ಯುನ್ಮಾನ ಮಾಧ್ಯಮದವರಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿಗಳನ್ನು ವಿತರಣೆ ಮಾಡಲಾಯಿತು.
ಯಾದಗಿರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆಯುಷ್ ಇಲಾಖೆ ವತಿಯಿಂದ ಪತ್ರಿಕಾ ಹಾಗೂ ವಿದ್ಯುನ್ಮಾನ ಮಾಧ್ಯಮದವರಿಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಆಯುಷ್ ಕಚೇರಿಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿಗಳನ್ನು ವಿತರಣೆ ಮಾಡಲಾಯಿತು.
ಜಿಲ್ಲಾ ಆಯುಷ್ ಅಧಿಕಾರಿ ಡಾ.ವಂದನಾ ಜೆ.ಗಾಳಿಯವರ್, ಕೋವಿಡ್-19 ವಿಶ್ವವ್ಯಾಪಿ ಹರಡಿಕೊಂಡಿದೆ. ಈ ಸಂದರ್ಭದಲ್ಲಿ ಆಯುಷ್ ಇಲಾಖೆ ನಿರ್ದೇಶನಾಲಯದಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದ, ಯುನಾನಿ ಮತ್ತು ಹೋಮಿಯೋಪಥಿ ಔಷಧಿಗಳು ಸರಬರಾಜಾಗಿರುತ್ತವೆ. ಮೊದಲನೆ ಹಂತದಲ್ಲಿ ಪತ್ರಕರ್ತರು ಹಾಗೂ ಸಾರ್ವಜನಿಕರೊಂದಿಗೆ ನೇರ ಸಂಪರ್ಕವಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಈ ಔಷಧಿಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದರು.
ಕೊರೊನಾ ರೋಗಕ್ಕೆ ನಿಖರವಾದ ಔಷಧಿ ಇಲ್ಲ. ರೋಗದ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಮುನ್ನೆಚ್ಚರಿಕೆ ಕ್ರಮಗಳೇ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಯುವ ಸದ್ಯದ ಪರಿಹಾರವಾಗಿದೆ ಎಂದರು.