ಮಹಾದಾಯಿ ನದಿ ನೀರಿನ ವಿವಾದದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಡೆಗೆ ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲಬುರ್ಗಿಯಲ್ಲಿ ಮಾತನಾಡಿದ ಅವರು, ನರೇಂದ್ರಮೋದಿ ಅವರು ಮನಸ್ಸು ಮಾಡಿದರೆ ಕ್ಷಣದಲ್ಲಿ ಮಹಾದಾಯಿ ಸಮಸ್ಯೆಯನ್ನು ಬಗೆಹರಿಸಬಹುದು. ಆದರೆ, ಗೋವಾ ಮುಖ್ಯಮಂತ್ರಿಗೆ ಈ ವಿಚಾರದಲ್ಲಿ ಮೋದಿ ಅವರು ಏನನ್ನೂ ಹೇಳುತ್ತಿಲ್ಲ ಎಂದಿದ್ದಾರೆ.
7.5 ಟಿಎಂಸಿ ನೀರು ರಾಜ್ಯಕ್ಕೆ ಕೊಡಬೇಕು ಎಂದು ಈ ಹಿಂದೆ ಮೋದಿ ಅವರೂ ಹೇಳಿದ್ದಾರೆ. ಆದರೆ, ಮಹಾದಾಯಿ ವಿವಾದ ಬಗೆಹರಿಯುವುದು ಬಿಜೆಪಿಗೆ ಬೇಕಿಲ್ಲ ಎಂದು ದೂರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.