ಮುಂಬೈ : ಮುಂಬೈನ ಖಾಸಗಿ ಶಾಲೆಯೊಂದರ ಆವರಣದಲ್ಲಿ 12 ವರ್ಷದ ವಿದ್ಯಾರ್ಥಿನಿಯ ಸ್ಕರ್ಟ್ನಲ್ಲಿ ಕೈ ಹಾಕಿ, ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದ ಹಿನ್ನಲೆಯಲ್ಲಿ ಆಕೆಯ ಪೋಷಕರು ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರದ ಉತ್ತರ ಮುಂಬೈ ಚಾರ್ಕೋಪ್ ಪ್ರದೇಶದ ಖಾಸಗಿ ಶಾಲೆಯ ಕ್ಯಾಂಟೀನ್ನಲ್ಲಿ ಗುರುವಾರ ಬೆಳಗ್ಗೆ ವಿದ್ಯಾರ್ಥಿನಿ ಒಬ್ಬಳೇ ಇದ್ದಾಗ, ಅಪರಿಚಿತ ಬಾಲಕನೊಬ್ಬ ಆಕೆಯನ್ನು ಹಿಡಿದು, ಸ್ಕರ್ಟ್ ನಲ್ಲಿ ಕೈಹಾಕಿ ಲೈಂಗಿಕ ಕಿರುಕುಳ ನೀಡಿ ಪರರಾರಿಯಾಗಿದ್ದಾನೆ.
ಈ ವಿಚಾರವನ್ನು ಬಾಲಕಿ ಪೋಷಕರಿಗೆ ತಿಳಿಸಿದ್ದ ಕಾರಣ ಆಕೆಯ ಪೋಷಕರು ಶಾಲೆಯ ಆಡಳಿತ ಮಂಡಳಿ ವಿದ್ಯಾರ್ಥಿಗಳ ರಕ್ಷಣೆಯಲ್ಲಿ ನಿಷ್ಕಾಳಜಿ ತೋರಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ತಕ್ಷಣವೇ ತಪ್ಪಿಸ್ಥನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಪೋಕ್ಸೋ ಕಾಯ್ದೆ ಅಡಿ ಪ್ರಕರಣದ ದಾಖಲಾಗಿದ್ದು, ಶಾಲೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಗಳ ಮೂಲಕ ತಪ್ಪಿತಸ್ಥರನ್ನು ಪತ್ತೆ ಹಚ್ಚುವುದಾಗಿ ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ