Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪ್ರೋತ್ಸಾಹ ಧನ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್: ಇಲ್ಲಿದೆ ಹೆಚ್ಚಿನ ವಿವರ

HC Mahadevappa

Krishnaveni K

ಬೆಂಗಳೂರು , ಶುಕ್ರವಾರ, 8 ನವೆಂಬರ್ 2024 (09:59 IST)
ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಪ್ರೋತ್ಸಾಹ ಧನ ಹೆಚ್ಚಳ ಮಾಡಲಾಗಿದೆ.

ಐಐಟಿ/ಐಐಎಂ/ಐಐಎಸ್ ಸಿ/ಎನ್ಐಟಿಯಂತಹ ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1 ಲಕ್ಷ ರೂ.ನಿಂದ 2 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪಿಯುಸಿಯಲ್ಲಿ ಶೇ.95 ಕ್ಕಿಂತ ಹೆಚ್ಚು ಅಂಕ ಪಡೆದರೂ ನೀಟ್ ಪ್ರವೇಶಾತಿ ಪರೀಕ್ಷೆಯಲ್ಲಿ ಮ್ಯಾನೇಜ್ ಮೆಂಟ್ ಕೋಟಾದಡಿ ಎಂಬಿಬಿಎಸ್ ಸೀಟು ಪಡೆದ ಪರಿಶಿಷ್ಟ ಜಾತಿಯ ಮಕ್ಕಳಿಗೆ 25 ಲಕ್ಷ ರೂ. ಕಾಲೇಜು ಶುಲ್ಕವಾಗಿ ಸರ್ಕಾರ ಪಾವತಿಸುತ್ತದೆ.

ಎಂಬಿಬಿಎಸ್ ಮೊದಲ ವರ್ಷ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದು ಓದುತ್ತಿರುವ ಪರಿಶಿಷ್ಟ ಜಾತಿಯ ಮಕ್ಕಳಿಗೆ 25 ಲಕ್ಷ ರೂ. ಪ್ರೋತ್ಸಾಹ ಧನ ನೀಡುವ ಯೋಜನೆಗೆ ಸರ್ಕಾರ ಅಸ್ತು ಎಂದಿದೆ. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಹೊಸ ಆದೇಶ ಹೊರಡಿಸಿದೆ.

ಪಿಯುಸಿಯಲ್ಲಿ ಶೇ.95 ಕ್ಕಿಂತ ಹೆಚ್ಚು ಅಂಕ ಪಡೆದರೂ ನೀಟ್ ಪ್ರವೇಶಾತಿ ಪರೀಕ್ಷೆಯಲ್ಲಿ ಸರ್ಕಾರೀ ಕೋಟಾದಡಿ ಸೀಟು ಸಿಗದೇ ಮ್ಯಾನೇಜ್ ಮೆಂಟ್ ಕೋಟಾಡದಿ ಸೀಟು ಪಡೆದ ವಿದ್ಯಾರ್ಥಿಗಳು ಶುಲ್ಕ ಪಾವತಿಸಲು ಕಷ್ಟವಾಗುತ್ತಿತ್ತು. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ ಮತ್ತು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಪ್ರೋತ್ಸಾಹ ಧನ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರೈತರ ಒಂದು ಅಡಿ ಜಾಗವನ್ನು ಕಿತ್ತುಕೊಳ್ಳಲು ಬಿಜೆಪಿ ಬಿಡುವುದಿಲ್ಲ: ಬಿವೈ ವಿಜಯೇಂದ್ರ