ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 3,805 ಮಂದಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.. ಕಳೆದ 24 ಗಂಟೆಗಳಲ್ಲಿ ಸೋಂಕಿನಿಂದ 22 ಮಂದಿ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದವರ ಸಂಖ್ಯೆ 5 ಲಕ್ಷದ 24ಸಾವಿರದ 24ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 3,805 ಹೊಸ ಪ್ರಕರಣಗಳು ಮತ್ತು 3,168 ಮಂದಿ ಚೇತರಿಸಿಕೊಂಡಿದ್ದಾರೆ.. ಸಕ್ರಿಯ ಪ್ರಕರಣಗಳು 20,303 ಇವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.