Publish Date: Thu, 11 May 2023 (08:36 IST)
Updated Date: Thu, 11 May 2023 (10:15 IST)
ವಿಧಾನಸಭಾ ಚುನಾವಣೆ ಮತದಾನ ಅಂತಿಮಗೊಂಡು ಚುನಾವಣೋತ್ತರ ಸಮೀಕ್ಷೆಗಳು ಬಿಡುಗಡೆಯಾಗುತ್ತಿರುವ ಬೆನ್ನಲ್ಲೇ ಮಾತನಾಡಿದ ಸಿದ್ದರಾಮಯ್ಯ, ಕರಾವಳಿ ಭಾಗದಲ್ಲಿ ಈ ಬಾರಿ ನಮ್ಮ ಸೀಟು ಹೆಚ್ಚಾಗಲಿದೆ.
ಬಜರಂಗದಳ ವಿಚಾರ ಒಂದು ವಿವಾದದ ವಿಚಾರವೇ ಅಲ್ಲ. ನಾವು ನಮ್ಮ ಪ್ರಣಾಳಿಕೆಯಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇವೆ. ಬಿಜೆಪಿಯವರು ಅದನ್ನು ಅಪಪ್ರಚಾರ ಮಾಡಿದರು.
ಲಿಂಗಾಯತ ನಾಯಕರೆಲ್ಲಾ ಭ್ರಷ್ಟಾಚಾರಿಗಳು ಅಂತ ನಾನೆಲ್ಲಿ ಹೇಳಿದ್ದೆ? ನಾನು ಬಸವರಾಜ ಬೊಮ್ಮಾಯಿ ಭ್ರಷ್ಟಾಚಾರಿ ಅಂತ ಹೇಳಿದ್ದೆ. ನನ್ನ ಮಾತನ್ನು ತಿರುಚಿ ಅಪಪ್ರಚಾರ ಮಾಡಿದರು ಎಂದು ಹೇಳಿದರು.