ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಆದ್ದರಿಂದ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ನ.9 ರವರಗೆ ಭಾರೀ ಮಳೆಯಾಗಲಿದೆ. ಕೆಲ ಜಿಲ್ಲೆಗಳಿಗೆ ಯಲ್ಲೋ ಅಲಟ್೯ ನೀಡಲಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ದೊಡ್ಡಬಳ್ಳಾಪುರ ಜಿಲ್ಲೆಗಳಿಗೆ ಸೋಮವಾರ ಮತ್ತು ಯಲ್ಲೋ ಅಲಟ್೯ ನೀಡಲಾಗುತ್ತದೆ.
ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗಲಿದೆ, ಕೆಲವು ಜಿಲ್ಲೆಗಳಿಗೆ ಯಲ್ಲೋ ಹಾಗೂ ಆರೆಂಜ್ ಅಲಟ್೯ ಪ್ರಕಟಿಸಲಾಗಿದೆ.
ಉ.ಕ. ಭಾಗದಲ್ಲಿ ಒಣಹವೆ:
ಕಳೆದ ಮೂರು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಶುಕ್ರವಾರ ರಾತ್ರಿ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಉತ್ತರ ಕರ್ನಾಟಕ ಭಾಗದಲ್ಲಿ ಒಣಹವೆ ಮುಂದುವರಿಯಲಿದೆ, ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ:
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮೂರು ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಸಂಯೋಜನೆ:
ರಾಜ್ಯದಲ್ಲಿ 77 ಲಕ್ಷ ಹೆಕ್ಟೇರ್ ಬಿತ್ತನೆಯಾಗುವ ಗುರಿ ಹೊಂದಿದ್ದು, ಮುಂಗಾರು ಮಳೆಗೆ 50 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಬಿತ್ತನೆಯಾಗಿತ್ತು. ಹಿಂಗಾರಿನಲ್ಲಿ 15 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಬಿತ್ತನೆಯಾಗಿದೆ. ತಿಂಗಳ ಪೂರ್ಣ ಪ್ರಮಾಣದಲ್ಲಿ ಬಿತ್ತನೆಯಾಗಲಿದೆ ಎಂದು ನಿಖರವಾಗಿ.