ಬಾಬಾ ಸಾಹೇಬ್ ಅಂಬೇಡ್ಕರ್ ಅವರ 66 ನೇ ಮಹಾಪರಿನಿರ್ವಾಣ ಹಾಗೂ ಪುಣ್ಯ ಸ್ಮರಣೆಯ ದಿನವಾದ ಇಂದು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾತಿ ಹೆಚ್ಚಿಸುವ ಮೂಲಕ ಕ್ರಾಂತಿಕಾರಿ ನಿರ್ಧಾರ ಕೈಗೊಳ್ಳಲಾಗಿದೆ. ಭವಿಷ್ಯದಲ್ಲಿ ಮಕ್ಕಳಿಗೆ ಶಿಕ್ಷಣ, ಉದ್ಯೋಗ ದಲ್ಲಿ ಶಕ್ತಿಯನ್ನು ತುಂಬುವ ಕೆಲಸ ಆಗಲಿದೆ. 29 ಸಾವಿರ ಕೋಟಿ ರೂ.ಗಳನ್ನು ಎಸ್.ಸಿ.ಎಸ್. ಪಿ/ ಟಿ ಎಸ್.ಪಿ ಅನುದಾನದಲ್ಲಿ ಮೀಸಲಿರಿಸಲಾಗಿದೆ.ಉದ್ಯೋಗದಲ್ಲಿರುವ ಹೆಣ್ಣು ಮಕ್ಕಳಿಗೆ ಹಾಸ್ಟೆಲ್, 75 ಯೂನಿಟ್ ವರೆಗೂ ಉಚಿತ ವಿದ್ಯುತ್ ಸರಬರಾಜು, ಗೃಹ ನಿರ್ಮಾಣ ಕ್ಕೆ 2 ಲಕ್ಷ ರೂಗಳ ಸಹಾಯಧನ, ಭೂಒಡೆತನ ಯೋಜನೀಡಿ 15 ಲಕ್ಷದಿಂದ 20 ಲಕ್ಷಕ್ಕೆ ಅನುದಾನ ಹೆಚ್ಚಿಸಲಾಗಿದೆ.ಹಾಸ್ಟೆಲ್ ಗಳಿಗೆ ಶುಲ್ಕ, ಉದ್ಯೋಗ ಕ್ಕೆ ವಿಶೇಷ ಕಾರ್ಯಕ್ರಮ ರೂಪಿಸಿದೆ ಎಂದರು