Publish Date: Sat, 29 Jul 2023 (17:07 IST)
Updated Date: Sat, 29 Jul 2023 (17:10 IST)
ಮಹಾರಾಷ್ಟ್ರ ಗಡಿ & ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರೋ ಮಳೆ ಹಿನ್ನೆಲೆ, ಬಾಗಲಕೋಟೆ ಜಿಲ್ಲೆಯ ಘಟಪ್ರಭಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹಿರಣ್ಯಕೇಶಿಯಿಂದ ಘಟಪ್ರಭಾ ನದಿಗೆ ನೀರು ಹರಿದು ಬರುತ್ತಿದೆ. ಸದ್ಯ ಘಟಪ್ರಭಾ ನದಿಗೆ 10 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಮುಧೋಳ ತಾಲೂಕಾಡಳಿತ ಈಗಾಗಲೇ ನದಿ ಪಾತ್ರದ ಗ್ರಾಮಗಳಿಗೆ ಕಟ್ಟೆಚ್ಚರ ಸೂಚಿಸಿದ್ದಾರೆ.