ಲಾರ್ಡ್ಸ್ ಟೆಸ್ಟ್ ಪಂದ್ಯದ ಗೆಲುವಿನಿಂದ ಬೀಗುತ್ತಿರುವ ಭಾರತ ತಂಡ ನಾಳೆಯಿಂದ ಹೆಡಿಂಗ್ಲೆಯಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಯಾವುದೇ ಬದಲಾವಣೆ ಮಾಡದೇ ಇರಲು ನಿರ್ಧರಿಸಿದೆ.
ಹೆಡ್ಡಿಂಗ್ಲೆಯಲ್ಲಿ ನಡೆಯಲಿರುವ ಪಂದ್ಯದಲ್ಲಿ ಗೆಲುವಿನ ತಂಡವನ್ನು ಮುಂದುವರಿಯಲು ನಿರ್ಧರಿಸಿದ್ದು, ಇದರಿಂದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0ಯಿಂದ ಮುನ್ನಡೆ ಪಡೆಯುವ ವಿಶ್ವಾಸವಿದೆ ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿದರು.
ಎರಡನೇ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಬ್ಯಾಟಿಂಗ್ ನಲ್ಲಿ ಮಿಂಚಿದರೂ ಬೌಲಿಂಗ್ ನ
ಲ್ಲಿ ನಿರಾಸೆ ಮೂಡಿಸಿದ್ದರು. ಆದ್ದರಿಂದ ಆರ್.ಅಶ್ವಿನ್ ಅವರನ್ನು ಮೂರನೇ ಟೆಸ್ಟ್ ನಲ್ಲಿ ಆಡಿಸುವ ಮೂಲಕ ಮತ್ತಷ್ಟು ಹಿಡಿತ ಸಾಧಿಸುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ಈ ವದಂತಿಯನ್ನು ಕೊಹ್ಲಿ ತಳ್ಳಿ ಹಾಕಿದ್ದಾರೆ.