Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಸಿಡಿ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಶಾಸಕ ರಮೇಶ್ ಜಾರಕಿಹೊಳಿಯವರನ್ನು ನಿರ್ದೇಶಕ ಇಂದ್ರಜಿತ್ ಲಂಕೇಶ್ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಹಿಂದೆ ಡ್ರಗ್ ಮಾಫಿಯಾ ಪ್ರಕರಣ ವಿವಾದವಾದಾಗ ಇಂದ್ರಜಿತ್ ಲಂಕೇಶ್ ಹಲವು ಮಹತ್ವದ ವಿಚಾರಗಳನ್ನು ಹೊರಹಾಕಿದ್ದರು. ಇದೇ ಕಾರಣಕ್ಕೆ ಅವರು ಸಿಸಿಬಿ ಪೊಲೀಸರನ್ನು ಭೇಟಿಯಾಗಿದ್ದರು.
ಇದೀಗ ರಮೇಶ್ ಜಾರಕಿಹೊಳಿಯವರನ್ನು ಭೇಟಿಯಾಗಿರುವುದಕ್ಕೂ ಸಿಡಿ ಪ್ರಕರಣಕ್ಕೂ ಏನಾದರೂ ಸಂಬಂಧವಿದೆಯೇ ಎಂದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿನ ಸದಾಶಿವನಗರದ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ ಇಂದ್ರಜಿತ್ ಮಾಧ‍್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ಕಾರಿನಲ್ಲಿ ತೆರಳಿದ್ದಾರೆ.