Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪ್ರಭಾವಿ ಸಚಿವರಿಗೆ ಕಾಂಗ್ರೆಸ್ ಮುಖಂಡನಿಂದಲೇ ಕಪಾಳಮೋಕ್ಷ: ಎಚ್‌ಡಿಕೆ ಲೇವಡಿ

Government of Karnataka

Sampriya

ಮೈಸೂರು , ಭಾನುವಾರ, 10 ನವೆಂಬರ್ 2024 (13:02 IST)
Photo Courtesy X
ಮೈಸೂರು: ಇಲ್ಲಿ ನಡೆದಿದ್ದ ಖಾಸಗಿ ಕಾರ್ಯಕ್ರಮವೊಂದರಲ್ಲಿ ರಾಜ್ಯ ಸರ್ಕಾರದ ಪ್ರಭಾವಿ ಸಚಿವರೊಬ್ಬರಿಗೆ ಕಾಂಗ್ರೆಸ್ ಮುಖಂಡರೊಬ್ಬರು ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾಗಿದ್ದು, ಈ ಘಟನೆ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತಿದೆ.

ಚುನಾಯಿತ ಪ್ರತಿನಿಧಿಯೊಬ್ಬರ ಮಗಳ ನಿಶ್ಚಿತಾರ್ಥ ಸಮಾರಂಭದಲ್ಲಿ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಸಚಿವರು ಮತ್ತು ಕಾಂಗ್ರೆಸ್‌ ಮುಖಂಡನೂ ಘಟನೆಯನ್ನು ಅಲ್ಲಗಳೆದಿದ್ದಾರೆ.

ಸಚಿವರು ಕಾಂಗ್ರೆಸ್ ಮುಖಂಡನ ಎದುರಿಗೆ ಬಂದು ಹಗುರವಾದ ಧಾಟಿಯಲ್ಲಿ ಮಾತನಾಡಿದ್ದು, ಈ ವೇಳೆ ಕೆರಳಿದ ಕಾಂಗ್ರೆಸ್ ಮುಖಂಡ ಸಚಿವರಿಗೆ ಕಪಾಳ ಮೋಕ್ಷ ಮಾಡಿದರು ಎಂದು ತಿಳಿದುಬಂದಿದೆ. ಈ ಘಟನೆಗೆ ಹಲವು ಮಂದಿ ಸಾಕ್ಷಿಯಾಗಿದ್ದು, ಒಂದು ಕ್ಷಣ ಬೆಚ್ಚಿಬಿದ್ದಿದ್ದಾರೆ

ಸಚಿವ ಹಾಗೂ ಕಪಾಳಮೋಕ್ಷ ಮಾಡಿದ ಕಾಂಗ್ರೆಸ್ ಮುಖಂಡ ಇಬ್ಬರೂ ಹಲವು ವರ್ಷಗಳಿಂದ ಪರಿಚಿತರಾಗಿದ್ದು, ಸ್ಥಳದಲ್ಲಿ ಹೆಚ್ಚು ಜನರಿದ್ದ ಕಾರಣ ಸಚಿವರ ಬೆಂಬಲಿಗರು ಗಲಾಟೆಯನ್ನು ಮಾಡದೆ ಸ್ಥಳದಿಂದ ತೆರಳಿದ್ದರು ಎಂದು ಹೇಳಲಾಗುತ್ತಿದೆ. ಅವರಿಬ್ಬರೂ ಈ ಹಿಂದೆ ಜೆಡಿಎಸ್‌ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು.

ಇಬ್ಬರ ನಡುವೆ ವರ್ಗಾವಣೆ ದಂಧೆ ಹಣ ಹಂಚಿಕೆ ವಿಚಾರದಲ್ಲಿ ಗಲಾಟೆಯಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು  ಆರೋಪಿಸಿದ್ದಾರೆ.

ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ. ಈ ದಂಧೆ ವಿಚಾರವಾಗಿಯೇ ಮೈಸೂರಿನಲ್ಲಿ ಸಚಿವರು, ಮತ್ತಿತರರು ಹೊಡೆದಾಡಿಕೊಂಡಿದ್ದಾರೆಂಬ ಮಾಹಿತಿ ಇದೆ. ಒಬ್ಬ ಸಚಿವರನ್ನು ಬಹಿರಂಗವಾಗಿ ಹೊಡೆದಿದ್ದಾರೆ. ರಾಜ್ಯದ ಸ್ಥಿತಿ ಎಲ್ಲಿಗೆ ಬಂದಿದೆ ನೋಡಿ ಎಂದು ಲೇವಡಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಂಜಿನ್- ಕೋಚ್‌ ಮಧ್ಯೆ ಕೆಲಸಮಾಡುತ್ತಿದ್ದ ವೇಳೆ ಅಪ್ಪಚ್ಚಿಯಾದ ರೈಲ್ವೆ ಉದ್ಯೋಗಿ