Webdunia - Bharat's app for daily news and videos

Install App

ರಾಮಮಂದಿರ ನಿರ್ಮಾಣದ ಸುಗ್ರೀವಾಜ್ಞೆ ಹೊರಡಿಸಲು ಒತ್ತಾಯ

Webdunia
ಮಂಗಳವಾರ, 13 ನವೆಂಬರ್ 2018 (19:12 IST)
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ದಿನೇ ದಿನೇ ವಿಳಂಬವಾಗುತ್ತಿದ್ದು, ರಾಮಮಂದಿರ ನಿರ್ಮಾಣದ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ವಿಶ್ವಹಿಂದೂ ಪರಿಷತ್ ನ ರಾಷ್ಟ್ರೀಯ ಸಂಘಟನಾ ಮುಖಂಡ ಮಿಲಿಂದ ಪರಾಂಡೆ ಆಗ್ರಹಿಸಿದ್ದಾರೆ. 

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು, ಕಳೆದ ತಿಂಗಳು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿಚಾರಣೆಗೆ ಕೇವಲ ನಾಲ್ಕೈದು ನಿಮಿಷಗಳ ಸಮಯ ನೀಡಲಾಗಿತ್ತು. ಆದ್ರೆ  ನ್ಯಾಯಾಲಯದ ತೀರ್ಪು ಪ್ರಕಟವಾಗುವ ವರೆಗೂ ಕಾಯುತ್ತಾ ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಈ ಬಾರಿಯ ಸಂಸತ್ ಅಧಿವೇಶನದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇನ್ನು ಈ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವ ನಿಟ್ಟಿನಲ್ಲಿ ಇದೇ ನವೆಂಬರ್ 25 ರಂದು ನಗರದ ಮೂರುಸಾವಿರ ಮಠದ ಆವರಣದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ರಾಜ್ಯದ ಹಲವು ಮಠಾದೀಶರು, ಸಮಾಜ ಚಿಂತಕರು ಸೇರಿದಂತೆ ನೂರಾರು ಜನ ಭಾಗವಹಿಸಲಿದ್ದು, ಕೇಂದ್ರ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗುವದು ಎಂದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments