ಬೆಂಗಳೂರು: ದೇಶದಾದ್ಯಂತ ನೋಟು ನಿಷೇಧ ವಿರೋಧಿಸಿ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ನಾಳೆ ಕರೆಕೊಟ್ಟಿರುವ ಭಾರತ ಬಂಧ್ ರಾಜ್ಯದಲ್ಲಿ ಅಷ್ಟಾಗಿ ಕಾಡದು. ರಾಜ್ಯ ಸರ್ಕಾರದಿಂದ ಯಾವುದೇ ಸ್ಪಷ್ಟ ಸೂಚನೆ ಬರದ ಹಿನ್ನಲೆಯಲ್ಲಿ ಕೆಎಸ್ಆರ್ ಟಿಸಿ, ಬಿಎಂಟಿಸಿ ಮತ್ತು ಮೆಟ್ರೋ ರೈಲು ಸಂಚಾರ ಎಂದಿನಂತೆ ಇರಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ಬಂಧ್ ಗೆ ಸರ್ಕಾರದ ಬೆಂಬಲವಿಲ್ಲ ಎಂದಿದ್ದರು. ಆದರೆ ಕಾಂಗ್ರೆಸ್ ಪಕ್ಷ ಮಾತ್ರ ಬಂಧ್ ಆಚರಿಸುವುದಾಗಿ ಹೇಳಿಕೊಂಡಿದೆ. ಹೀಗಾಗಿ ಸಂಚಾರ ವ್ಯವಸ್ಥೆ ಬಗ್ಗೆ ಸಾರ್ವಜನಿಕರಲ್ಲಿ ಆತಂಕವಿತ್ತು.
ಅದನ್ನೀಗ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ನಿವಾರಿಸಿದ್ದಾರೆ. ಇದೇ ವೇಳೆ ಎಲ್ಲಾ ಜಿಲ್ಲೆಗಳಲ್ಲೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಆದರೆ ರಾಮನಗರ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ಮಾತ್ರ ಸುರಕ್ಷತಾ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ. ಹೀಗಾಗಿ ಜನ ಸಾಮಾನ್ಯರಿಗೆ ಬಂಧ್ ಬಿಸಿ ತಟ್ಟದು ಎಂದು ಲೆಕ್ಕಾಚಾರ ಹಾಕಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ