Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಸಾಮಾಜಿಕ ಜಾಲತಾಣದಿಂದ ಪರಿಚಯವಾದ ಯುವಕನ ಜತೆ ಪ್ರೀತಿಗೆ ಬಿದ್ದು ಯುವತಿಯೊಬ್ಬಳು ದಾರುಣವಾಗಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಲವ್ ಫೇಲ್ಯೂರ್ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ವಿದ್ಯಾರ್ಥಿನಿ ಪವಿತ್ರಾ!
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕುರಬೂರು ಸರ್ಕಾರಿ ಕೃಷಿ ಮಹಾವಿದ್ಯಾಲಯದಲ್ಲಿ ಬಿ.ಎಸ್ಸಿ ಅಗ್ರೀಕಲ್ಚರ್ ಓದುತ್ತಿದ್ದ ಪವಿತ್ರಾ ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನ ಪ್ರೀತಿಯ ಬಲೆಗೆ ಬಿದ್ದು ಜೀವ ಕಳೆದುಕೊಂಡಿದ್ದಾಳೆ. ಕಾಲೇಜಿನ ವಸತಿ ನಿಲಯದಲ್ಲಿಯೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ.
ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಮೊಬೈಲ್ನಲ್ಲಿ ವಿಡಿಯೋ ಮಾಡಿಟ್ಟು ಭಗ್ನಪ್ರೇಮದ ಕುರಿತು ಮಾಹಿತಿ ನೀಡಿದ್ದಾಳೆ. ಜತೆಗೆ ಡೆತ್ನೋಟ್ ಕೂಡ ಬರೆದಿಟ್ಟಿದ್ದಾಳೆ.
ಇನ್ಟಾಗ್ರಾಂ ನಲ್ಲಿ ಪರಿಚಯವಾದ ಹುಡಗನ ಜೊತೆ ಲವ್ ಮಾಡಿದ್ದು, ಈಗ ಲವ್ ಫೇಲ್ಯೂರ್ ಆಗಿದೆ. ಈ ಹಿನ್ನೆಲೆಯಲ್ಲಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿದ್ಯಾರ್ಥಿನಿ ಹೇಳಿದ್ದಾಳೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ದಾಖಲಾಗಿದೆ