ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಯೋಜನೆಗಳಿಗೆ ಹಣ ಹೊಂದಿಸಲು ಹೆಣಗಾಡ್ತಿದೆ.. ಈ ಹಿನ್ನೆಲೆ ಮುದ್ರಾಂಕ ನೋಂದಣಿ ಶುಲ್ಕವನ್ನು ಹೆಚ್ಚಿಸಲು ಸರ್ಕಾರ ಪ್ಲ್ಯಾನ್ ಮಾಡಿಕೊಂಡಿದೆ ಎಂದು ಹೇಳಲಾಗ್ತಿದೆ.ಈ ಬಾರಿಯ ಚಳಿಗಾಲದ ಅಧಿವೇಶನದಲ್ಲೇ ಮುಂದ್ರಾಂಕ ಕಾಯ್ದೆಗೆ ತಿದ್ದುಪಡಿ ತರುವ ಸಾಧ್ಯತೆ ಇದೆ.
ನಾಳೆಯ ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ..ದತ್ತು ಡೀಡ್ಗೆ 500 ರಿಂದ 1 ಸಾವಿರ ಏರಿಕೆ ಮಾಡುವ ಸಾಧ್ಯತೆ ಇದೆ.. ಪ್ರಮಾಣಪತ್ರಕ್ಕೆ 20 ರಿಂದ 200 ರೂ. ಏರಿಕೆ ಮಾಡುವ ಸಾಧ್ಯತೆ ಇದೆ.. 10 ಲಕ್ಷದವರೆಗಿನ ಒಪ್ಪಂದಕ್ಕೆ 100 ರಿಂದ 500 ಕ್ಕೆ ಏರಿಕೆ ಮಾಡುವ ಸಾಧ್ಯತೆ ಇದೆ.