Publish Date: Wed, 30 Jan 2019 (10:56 IST)
Updated Date: Sat, 18 May 2019 (13:40 IST)
ಬೆಂಗಳೂರು : ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿ ಪೊಲೀಸರಿಂದ ತಪ್ಪಿಸಿಕೊಳ್ಳಲು ತಲೆಮೆರೆಸಿಕೊಂಡಿರುವ ಕಂಪ್ಲಿ ಶಾಸಕ ಗಣೇಶ್ ಅವರು ಮಾಜಿ ಶಾಸಕ ಯೋಗೇಶ್ವರ್ ತೆಕ್ಕೆಯಲ್ಲಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ.
ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರನ್ನು ಹುಡುಕಲು ಪೊಲೀಸರು ಒಟ್ಟು 4 ತಂಡಗಳನ್ನು ರಚಿಸಿ ಸತತವಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆದರೆ ಶಾಸಕ ಗಣೇಶ್ ನಾಪತ್ತೆಯಾಗಿ 10 ದಿನಗಳು ಕಳೆದರೂ, ಶಾಸಕರನ್ನು ಹುಡುಕುವಲ್ಲಿ ಪೊಲೀಸರು ವಿಫಲರಾಗಿದ್ದಾರೆ.
ಆದರೆ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದಾರೆ ಎಂಬ ವದಂತಿ ಕೇಳಿಬರುತ್ತಿದೆ. ಅಲ್ಲದೇ ಈ ಘಟನೆ ನಡೆದ ದಿನದಿಂದ ಯೋಗೇಶ್ವರ್ ಕೂಡ ವ್ಯಾಪ್ತಿ ಪ್ರದೇಶದಿಂದ ಹೊರಗಿದ್ದು, ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಅವರ ಮೊಬೈಲ್ ಸ್ವಿಚ್‌ಆಫ್ ಆಗಿದೆ ಎನ್ನಲಾಗಿದೆ.
ಅಪರೇಷನ್ ಕಮಲ ಯಶಸ್ವಿಗೊಳಿಸಲು ಹಾಗೂ ತಮ್ಮ ಶತ್ರುಗಳಾದ ಡಿಕೆಶಿ ಸಹೋದರರಿಗೆ ಸರಿಯಾದ ಪಾಠ ಕಲಿಸಲು ಅವರು ಹೀಗೆ ಮಾಡಿರಬಹುದು ಎಂದು ಶಂಕಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.