ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಕುರ್ಚಿ ಕದನ ಬಹುತೇಕ ಅಂತ್ಯವಾಗಿದ್ದು, ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಾಗಿದೆ. ಮೂಲಗಳ ಪ್ರಕಾರ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ, ಡಿಕೆ ಶಿವಕುಮಾರ್ ಅವರಿಗೆ ಪ್ರಬಲವಾದ ಎರಡು ಖಾತೆಗಳೊಂದಿಗೆ ಡಿಸಿಎಂ ಸ್ಥಾನ ನೀಡಲು AICC ಮುಂದಾಗಿದೆ. ಅಷ್ಟೇ ಅಲ್ಲದೇ ಕೆಪಿಸಿಸಿ ಅಧ್ಯಕ್ಷರಾಗಿಯೇ ಡಿಕೆ ಶಿವಕುಮಾರ್ ಅವರೇ ಮುಂದುವರಿಯುವ ಸಾಧ್ಯತೆಯಿದೆ. ಮೇ18ರ ಮಧ್ಯಾಹ್ನ 3.30ಕ್ಕೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತಯಾರಿ ನಡೆಯುತ್ತಿದೆ. ನಾಳೆ ತಪ್ಪಿದರೆ ಶನಿವಾರ ಕಾರ್ಯಕ್ರಮ ನಿಗದಿ ಮಾಡುವ ಬಗ್ಗೆ ಕಾಂಗ್ರೆಸ್ ನಲ್ಲಿ ಚರ್ಚೆಗಳಾಗುತ್ತಿವೆ. ಶುಕ್ರವಾರ ಅಮಾವಾಸ್ಯೆ ಇರುವ ಹಿನ್ನಲೆ ಪ್ರಮಾಣ ವಚನ ಬೇಡ ಎಂಬ ಬಗ್ಗೆ ಕೆಲವರು ಸಲಹೆ ನೀಡಿದ್ದಾರೆ. ಈಗಾಗಲೇ ತಯಾರಿ ಬಗ್ಗೆ ನಾಯಕರಿಂದ ಸೂಚನೆ ನೀಡಲಾಗಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ.