ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಟೀಕೆ ಮುಂದುವರಿಸಿದ್ದಾರೆ.
ಶಾಲಾ ಪಠ್ಯಗಳಲ್ಲಿ ಟಿಪ್ಪು ಸುಲ್ತಾನ್ ಇತಿಹಾಸವನ್ನು ಕೈಬಿಡಲು ರಾಜ್ಯ ಸರಕಾರ ಮುಂದಾಗಿರುವುದಕ್ಕೆ ಡಿ.ಕೆ.ಶಿವಕುಮಾರ್ ಖಂಡಿಸಿದ್ದಾರೆ.
ಇತಿಹಾಸ ಮರೆಮಾಚಲು ಬಿಡೋದಿಲ್ಲ ಎಂದು ಎಚ್ಚರಿಕೆ ನೀಡಿರುವ ಡಿಕೆಶಿ, ಟಿಪ್ಪುಜಯಂತಿ ಆಚರಿಸುವುದು ರಾಜ್ಯ ಸರಕಾರಕ್ಕೆ ಬಿಟ್ಟ ವಿಚಾರ. ಆದರೆ, ಟಿಪ್ಪು ಸುಲ್ತಾನ್ ಹೆಸರಿಲ್ಲದೆ ಈ ದೇಶದ ಇತಿಹಾಸ ಅಪೂರ್ಣ ಎನ್ನುವುದು ವಾಸ್ತವ. ರಾಷ್ಟ್ರಪತಿ ಅವರು ವಿಧಾನ ಮಂಡಲ ಜಂಟಿ ಅಧಿವೇಶನದಲ್ಲಿ ಟಿಪ್ಪು ಅವರ ಚರಿತ್ರೆ, ತ್ಯಾಗ, ದೇಶ ಭಕ್ತಿಯ ಬಗ್ಗೆ ಹಾಡಿ ಹೊಗಳಿರುವುದೇ ಇದಕ್ಕೆ ನಿದರ್ಶನ. ಹೀಗಂತ ಟ್ವಿಟ್ ಮಾಡಿದ್ದಾರೆ.