Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ನಂದಿನಿ ಬ್ರ್ಯಾಂಡ್ ಬಗ್ಗೆ ಹರಿದಾಡುತ್ತಿರುವ ಸುದ್ದಿ ಸುಳ್ಳು?

ನಂದಿನಿ ಬ್ರ್ಯಾಂಡ್ ಬಗ್ಗೆ ಹರಿದಾಡುತ್ತಿರುವ ಸುದ್ದಿ ಸುಳ್ಳು?
ಬೆಂಗಳೂರು , ಭಾನುವಾರ, 9 ಏಪ್ರಿಲ್ 2023 (09:57 IST)
ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ನಂದಿನಿ ಬ್ರ್ಯಾಂಡ್ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳ ಕುರಿತು ಕೆಎಂಎಫ್ ಸ್ಪಷ್ಟನೆ ಕೊಟ್ಟಿದೆ. ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿದೆ ಎಂದು ಕೆಎಂಎಫ್ ತಿಳಿಸಿದೆ.

ನಂದಿನಿ ಬ್ರ್ಯಾಂಡ್ ಹಾಲು ಇನ್ಮುಂದೆ ಮಾರುಕಟ್ಟೆಯಲ್ಲಿ ಲಭ್ಯವಾಗುವುದಿಲ್ಲ ಅನ್ನೋ ಬಗ್ಗೆ ಸಾಕಷ್ಟು ಸುಳ್ಳು ಸುದ್ದಿಗಳು ಹರಿದಾಡುತ್ತಿದೆ. ಇದೆಲ್ಲವೂ ಸತ್ಯಕ್ಕೆ ದೂರವಾಗಿದ್ದು, ಅಂತಹ ಯಾವುದೇ ಬೆಳವಣಿಗೆಗಳು ಕೆಎಂಎಫ್ನಲ್ಲಿ ನಡೆದಿರುವುದಿಲ್ಲವೆಂದು ತಿಳಿಸಲು ಬಯಸುತ್ತೇವೆ. ಯಾವುದೇ ಸಹಕಾರ ಸಂಸ್ಥೆ ಅಥವಾ ಉತ್ಪಾದನಾ ಮಹಾಮಂಡಳಗಳೊಂದಿಗೆ ನಾವು ಒಡಂಬಡಿಕೆ ಮಾಡಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದೆ. 

ದೇಶದ ಅನೇಕ ನಗರಗಳಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಲಭ್ಯವಾಗುತ್ತಿವೆ. ನಂದಿನಿ ಹಾಲು ಇತರೆ ಹಾಲಿನ ಬ್ರ್ಯಾಂಡ್ಗಳಿಗೆ ಪೈಪೋಟಿ ನೀಡುತ್ತಾ ಮಾರುಕಟ್ಟೆಯನ್ನು ವಿಸ್ತರಿಸುತ್ತಿದೆ. ಗ್ರಾಹಕರು ಎಂದಿನಂತೆ “ನಂದಿನಿ” ಬ್ರ್ಯಾಂಡ್ನ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಕೊಂಡು ಪ್ರೋತ್ಸಾಹಿಸಲು ನಾವು ಮನವಿ ಮಾಡುತ್ತೇವೆ ಎಂದು ಹೇಳಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಂಡೀಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ