Publish Date: Fri, 18 Sep 2020 (11:56 IST)
Updated Date: Fri, 18 Sep 2020 (11:58 IST)
ಬೆಂಗಳೂರು : ಬಿಜೆಪಿಯಲ್ಲಿ ಯಡಿಯೂರಪ್ಪ ನಾಯಕತ್ವದ ಬದಲಾವಣೆಯ ಕೂಗು ಹೆಚ್ಚಾಗಿ ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಯಡಿಯೂರಪ್ಪ ಅವರನ್ನು ನಾಯಕತ್ವದಿಂದ ಕೆಳಗಿಳಿಸಲು ಮುಹೂರ್ತ ಫಿಕ್ಸ್ ಆಗಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ.
ಯಡಿಯೂರಪ್ಪ ಅವರ ವಯಸ್ಸು, ಹಾಗೂ ಪಕ್ಷದ ವಿರೋಧದ ಹಿನ್ನಲೆಯಲ್ಲಿ ಯಡಿಯೂರಪ್ಪ ಅವರನ್ನು ನಾಯಕತ್ವ ಸ್ಥಾನದಿಂದ ಕೆಳಗಿಳಿಸಲು ನಿರ್ಧಾರ ಮಾಡಿದೆ ಎನ್ನಲಾಗಿದೆ. ಪಕ್ಷದ ಹಿತದೃಷ್ಟಿಯಿಂದ ಈ ಬಗ್ಗೆ ಪ್ರಧಾನಿ ಮೋದಿ ಜೊತೆ ಹೈಕಮಾಂಡ್ ಚರ್ಚಿಸಿ ನಿರ್ಧಾರ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.