ಇಸ್ಪೀಟ್ ಕ್ಲಬ್ ಮಾಲೀಕನ ಬರ್ಬರ ಕೊಲೆ

Webdunia
ಸೋಮವಾರ, 30 ಜುಲೈ 2018 (14:13 IST)
ಮಣಿಪಾಲ ಸಮೀಪದ ಇಸ್ಪೀಟ್ ಕ್ಲಬ್ ಒಂದರಲ್ಲಿ ತಂಡವೊಂದರ ಮಾಲಕನನ್ನು ಇರಿದು ಕೊಂದಿರುವ ಘಟನೆ ನಡೆದಿದೆ.

ಮೃತರನ್ನು ಉಡುಪಿಯ ಪುತ್ತೂರು ಗ್ರಾಮದ ಗುರುಪ್ರಸಾದ್ ಭಟ್ (45) ಎಂದು ಗುರುತಿಸಲಾಗಿದೆ. ಗುರುಪ್ರಸಾದ್ ಅವರು ಕ್ಲಬ್ ನಲ್ಲಿದ್ದ ವೇಳೆ ಓಮ್ನಿಯಲ್ಲಿ ಆಗಮಿಸಿದ ದುಷ್ಕರ್ಮಿಗಳು ಕ್ಲಬ್ ಗೆ ನುಗ್ಗಿ ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ. ನಂತರ ಅದೇ ಕಾರಿನಲ್ಲಿ ತಂಡ ಪರಾರಿಯಾಗಿದೆ. ಗಂಭೀರ ಗಾಯಗೊಂಡಿದ್ದ ಗುರುಪ್ರಸಾದ್ ರನ್ನು ತಕ್ಷಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಗುರುಪ್ರಸಾದ್ ಹಣದ ವ್ಯವಹಾರವನ್ನೂ ನಡೆಸುತ್ತಿದ್ದರು. ಇದೇ ಕಾರಣಕ್ಕೆ ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ. ಕೆಲ ವರ್ಷಗಳ ಹಿಂದೆ ಇವರುಸತ್ಯ ನ್ಯೂಸ್ಎಂಬ ವಾರ ಪತ್ರಿಕೆಯನ್ನೂ ನಡೆಸುತ್ತಿದ್ದರು. ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲಿಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ಮಣಿಪಾಲ ಇನ್ ಸ್ಪೆಕ್ಟರ್ ಸುದರ್ಶನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಧೆ ರಾಧೆ ಎನ್ನುತ್ತಿರುವಾಗಲೇ ಮುಳುಗಿದ ಬೋಟ್: 10 ಮಂದಿ ಜಲ ಸಮಾಧಿ Video

ಇಸ್ರೇಲ್ ಕೆಣಕುತ್ತಿರುವ ಪಾಕಿಸ್ತಾನ ಸಂಕಷ್ಟಕ್ಕೆ ಸಿಲುಕುತ್ತಾ

ಇಸ್ಲಾಮಾಬಾದ್ ನಲ್ಲಿ ಇಂದು ಇರಾನ್, ಅಮೆರಿಕಾ ಶಾಂತಿ ಮಾತುಕತೆ: ಪಾಕಿಸ್ತಾನದ ಭದ್ರತೆ ಹೇಗಿದೆ ಗೊತ್ತಾ

Karnata Weather: ಇಂದು ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವರದಿ

ಬೋರ್‌ವೆಲ್‌ಗೆ ಬಿದ್ದ ಎರಡೂವರೆ ವರ್ಷದ ಪುಟ್ಟ ಬಾಲಕ: ಮುಂದುವರಿದ ರಕ್ಷಣ ಕಾರ್ಯಾಚರಣೆ

ಮುಂದಿನ ಸುದ್ದಿ
Show comments