Publish Date: Thu, 05 Jan 2023 (08:18 IST)
Updated Date: Thu, 05 Jan 2023 (08:58 IST)
ಚಿತ್ರದುರ್ಗ : ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹೆಚ್.ಆಂಜನೇಯ ಆಪ್ತನ ದೊಡ್ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ.
ಹೊಳಲ್ಕೆರೆ ತಾಲೂಕಿನ ಪಾಡಿಗಟ್ಟೆ ಗ್ರಾಮದಲ್ಲಿರುವ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪಾಡಿಗಟ್ಟೆ ಸುರೇಶ್ ಮತ್ತು ಸುರೇಶ್ ಸಹೋದರ ಗುತ್ತಿಗೆದಾರ ತಿಪ್ಪೇಸ್ವಾಮಿ ಮನೆ ಮೇಲೆ ಹುಬ್ಬಳ್ಳಿಯಿಂದ ಆಗಮಿಸಿದ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಮಾಜಿ ಸಮಾಜ ಕಲ್ಯಾಣ ಸಚಿವ ಹಾಗೂ ಸಿದ್ದರಾಮಯ್ಯ ಅವರ ಪರಮಾಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಹೆಚ್.ಆಂಜನೇಯ ಅವರ ಬೆಂಬಲಿಗ ಸುರೇಶ್ 15 ವರ್ಷಗಳ ಹಿಂದೆ ಕಡಿಮೆ ಪ್ರಮಾಣದ ಆಸ್ತಿ ಹೊಂದಿದ್ದರು. ಆದರೆ 2018ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿ ಮುಕ್ತಾಯಗೊಳಿಸುವಷ್ಟರಲ್ಲಿ ಅಪಾರ ಪ್ರಮಾಣದ ಆಸ್ತಿ ಹಾಗೂ ಹಣಗಳಿಸಿರುವ ಆರೋಪ ಬಂದಿದೆ.