Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ದಾಳಿಗೆ ಹೆದರೋದಿಲ್ಲ. ಅನಗತ್ಯವಾಗಿ ಐಟಿ ದಾಳಿಯನ್ನೇ ದೊಡ್ಡದಾಗಿ ಬಿಂಬಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಎಲ್ಲಾ ಕಾಲದಲ್ಲಿಯೂ ಐಟಿ ದಾಳಿಗಳಾಗುತ್ತಾ ಬಂದಿವೆ. ಆದರೆ, ಸದ್ಯಕ್ಕೆ ಕೇಂದ್ರದಲ್ಲಿರುವ ಬಿಜೆಪಿ ಸರಕಾರ ಕಾಂಗ್ರೆಸ್ ನಾಯಕರನ್ನು ಹುಡುಕಿ ಆದಾಯ ತೆರಿಗೆ ಅಧಿಕಾರಿಗಳಿಂದ ದಾಳಿ ಮಾಡಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದಾಗ ಸಂಬಂಧಪಟ್ಟವರು ಐಟಿ ರಿಟರ್ನ್ಸ್ ಸಲ್ಲಿಸಿದ್ದಾರೆಯೇ ಎಂದು ಪರಿಶೀಲಿಸುತ್ತಾರೆ. ಪರಿಶೀಲನೆಯನ್ನೇ ಬಿಜೆಪಿಯವರು ದೊಡ್ಡ ವಿಚಾರವೆಂದು ಬಿಂಬಿಸುತ್ತಿದ್ದಾರೆ
ಆದಾಯ ತೆರಿಗೆ ಇಲಾಖೆ ಕೇಂದ್ರ ಸರಕಾರದ ಕೈಗೊಂಬೆಯಾಗದೆ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ಅಂದಾಗ ಮಾತ್ರ ಇಲಾಖೆಗೆ ಗೌರವ ಬರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.