ಬೆಂಗಳೂರು : ಕಾಮುಕನೊಬ್ಬ ನಾಲ್ಕು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ನೀಚ ಕೃತ್ಯ ನಗರದ ಸುಬ್ರಮಣ್ಯಪುರದಲ್ಲಿ ನಡೆದಿದೆ.
ಕೂಲಿ ಕೆಲಸಕ್ಕಾಗಿ ಯಾದಗಿರಿಯಿಂದ ಬಂದ ದಂಪತಿಗಳು ಸುಬ್ರಮಣ್ಯಪುರದ ಅರೇಹಳ್ಳಿಯ ನಿರ್ಮಾಣ ಹಂತದ ಕಟ್ಟಡದ ಶೆಡ್ ನಲ್ಲಿ ವಾಸವಿದ್ದರು. ಮಂಗಳವಾರ ಬೆಳಗ್ಗೆ ಮಗುವನ್ನು ಶೆಡ್ ನಲ್ಲಿಯೇ ಬಿಟ್ಟು ಪಕ್ಕದಲ್ಲಿ ಇದ್ದ ಕಟ್ಟಡದಲ್ಲಿ ಕೂಲಿ ಕೆಲಸಕ್ಕೆ ತೆರಳಿದ್ದರು.
ಆದರೆ ಶೆಡ್ ಬಳಿ ಆಟವಾಡುತ್ತಿದ್ದ ಮಗುವಿನ ಜೊತೆ ಯಾರು ಇಲ್ಲದಿರುವುದನ್ನು ಕಂಡು ಕಾಮುಕನೊಬ್ಬ ಮಗುವಿನ ಲೈಂಗಿಕ ದೌರ್ಜನ್ಯ ಎಸಗಿ ಪರಾರಿಯಾಗಿದ್ದಾನೆ. ಘಟನೆಯಿಂದ ಅಸ್ವಸ್ಥಗೊಂಡಿರುವ ಮಗುವನ್ನು ಆಸ್ಪತ್ರೆಗೆ ದಾಖಲಿಸಿದಾಗ ಪೋಷಕರಿಗೆ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ತಿಳಿದುಬಂದಿದೆ.
ತಕ್ಷಣ ಪೋಷಕರು ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಿಸಿದ್ದಾರೆ. ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೃತ್ಯ ಎಸಗಿರುವ ದುಷ್ಕರ್ಮಿಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.