Publish Date: Mon, 11 May 2020 (09:35 IST)
Updated Date: Mon, 11 May 2020 (09:37 IST)
ಬೆಂಗಳೂರು: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಧಾರಕಾರ ಮಳೆಯಾಗುವ ಸಾಧ‍್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಮಳೆಯಾಗಿದ್ದು ರೈತರ ಮೊಗದಲ್ಲಿ ಭರವಸೆ ಹುಟ್ಟಿಸಿದೆ. ಇದೀಗ ವಾಯು ಭಾರ ಕುಸಿತದಿಂದಾಗಿ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಕರಾವಳಿ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ‍್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕಳೆದ ಎರಡು ದಿನಗಳಿಂದ ಒಂದು ರೀತಿಯ ಮೋಡ ಕವಿದ ವಾತಾವರಣವಿದ್ದು, ಇಂದು-ನಾಳೆ ಮಳೆಯ ನಿರೀಕ್ಷೆಯಿದೆ.